ದಾವಣಗೆರೆ :ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಎಸ್ ವಿ ರಾಮಚಂದ್ರಪ್ಪ ಅವರನ್ನು ಅಭಿನಂದಿಸಲಾಯಿತು.
ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ರಾಮಚಂದ್ರಪ್ಪಗೆ ಅಭಿನಂದನೆ - ದಾವಣಗೆರೆ ರಾಜಕೀಯ ಸುದ್ದಿ
ಸಿಎಂ ಯಡಿಯೂರಪ್ಪ ಅವರು ನನಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ನನ್ನ ಮೇಲಿಟ್ಟಿರುವ ನಂಬಿಕೆ ಉಳಿಸಿಕೊಳ್ಳುವ ರೀತಿ ಕೆಲಸ ಮಾಡುತ್ತೇನೆ..
ಶಾಸಕ ಎಸ್. ವಿ. ರಾಮಚಂದ್ರಪ್ಪ
ಜಗಳೂರು ಪಟ್ಟಣದಲ್ಲಿ ಶಾಸಕರ ಅಭಿಮಾನಿಗಳು ಹಾರ ಹಾಕಿ ಪೇಟ ತೊಡಿಸಿ ಅಭಿನಂದಿಸಿದರು. ಈ ವೇಳೆ ಮಾತನಾಡಿದ ರಾಮಚಂದ್ರಪ್ಪ, ಸಿಎಂ ಯಡಿಯೂರಪ್ಪ ಅವರು ನನಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ನನ್ನ ಮೇಲಿಟ್ಟಿರುವ ನಂಬಿಕೆ ಉಳಿಸಿಕೊಳ್ಳುವ ರೀತಿ ಕೆಲಸ ಮಾಡುತ್ತೇನೆ ಎಂದರು.
ಇದೇ ವೇಳೆ ಶಾಸಕರ ಅನುದಾನದಲ್ಲಿ ನಿರುದ್ಯೋಗಿಗಳಿಗೆ ಕಾರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಎಸ್ಟಿ ನಿಗಮದ ವಿಭಾಗೀಯ ಅಧಿಕಾರಿ ರಂಗಪ್ಪ, ಜಿಲ್ಲಾ ಪಂಚಾಯತ್ ಸದಸ್ಯರಾದ ಮಂಜುನಾಥ, ಓಬಳೇಶ, ತಿಪ್ಪೇಸ್ವಾಮಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.