ದಾವಣಗೆರೆ: ಹರಿಹರ ತಾಲೂಕಿನ ಲಕ್ಕಶೆಟ್ಟಿಹಳ್ಳಿ ಗ್ರಾಮದಲ್ಲಿ ದುರಂತ ಘಟನೆಯೊಂದು ಜರುಗಿದೆ. ತಾಯಿ ತನ್ನ ಮಕ್ಕಳ ಮುಂದೇಯೇ ನೇಣು ಬಿಗಿದುಕೊಂಡಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ. ಆದರೆ, ಇದು ಅತ್ಮಹತ್ಯೆಯಲ್ಲ ಕೊಲೆ ಎಂದು ಪೋಷಕರು ಆರೋಪ ಮಾಡಿ ಮಲೇಬೆನ್ನೂರು ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಜಿಲ್ಲೆಯ ಹೊನ್ನಾಳಿ ತಾಲೂಕಿನ ರಾಮೇಶ್ವರ ಗ್ರಾಮದ ಲತಾ ಅವರನ್ನು ಕಳೆದ 8 ವರ್ಷಗಳ ಹಿಂದೆ ಸರ್ಕಾರಿ ಆಸ್ಪತ್ರೆಯಲ್ಲಿ ಎಫ್ಡಿಎ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಲ್ಲೇಶ ಎನ್ನುವರ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಗಂಡ- ಹೆಂಡತಿ ಖುಷಿಯಾಗಿ ಒಬ್ಬರನೊಬ್ಬರು ಪ್ರೀತಿಸುತ್ತಾ ಜೀವನ ಕಳೆಯುತ್ತಿದ್ದರು. ಇದರ ನಡುವೆ ದಂಪತಿಗೆ ಇಬ್ಬರು ಮಕ್ಕಳು ಸಹ ಆಗಿವೆ.