ದಾವಣಗೆರೆ:ತಂದೆಯ ಸಾವಿನಿಂದ ಮಾನಸಿಕ ಖಿನ್ನತೆಗೊಳಗಾದ ಯುವಕನೊಬ್ಬ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಸಮೀಪದ ಹಿರೇಕೋಗಲೂರು ಗ್ರಾಮದಲ್ಲಿ ನಡೆದಿದೆ.
ವೆಂಕಟೇಶ್ (25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕೆಲವು ದಿನಗಳ ಹಿಂದೆ ಯುವಕನ ತಂದೆ ರೇವಪ್ಪ ಅಕಾಲಿಕವಾಗಿ ನಿಧನರಾಗಿದ್ದರು. ತಂದೆ ಸಾವನಪ್ಪಿರುವ ಹಿನ್ನೆಲೆಯಲ್ಲಿ ಯುವಕ ವೆಂಕಟೇಶ್ ಮಾನಸಿಕ ಖಿನ್ನತೆಗೆ ಒಳಗಾಗಿ ನಿತ್ಯವೂ ಜುಗುಪ್ಸೆಯಿಂದ ಇರುತ್ತಿದ್ದ ಎಂದು ತಿಳಿದು ಬಂದಿದೆ.