ಕರ್ನಾಟಕ

karnataka

ETV Bharat / state

ಅತ್ಯಾಚಾರಿಗೆ 10 ವರ್ಷ ಜೈಲು, 60 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ - ಅತ್ಯಾಚಾರ ಪ್ರಕರಣ

ಹುಬ್ಬಳ್ಳಿಯಲ್ಲಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ ಜೊತೆಗೆ 60 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

10 years imprisionment for rape  convict
ಅತ್ಯಾಚಾರ ಅಪರಾಧಿಗೆ 10 ವರ್ಷ ಜೈಲು

By

Published : Sep 2, 2021, 4:08 PM IST

ಹುಬ್ಬಳ್ಳಿ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರವೆಸಗಿದ ಅಪರಾಧಿಗೆ ಇಲ್ಲಿಯ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 60 ಸಾವಿರ ರೂ. ದಂಡ ವಿಧಿಸಿದೆ.

ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದ ಮಂಜುನಾಥ ಗಾಣಿಗೇರ ಶಿಕ್ಷೆಗೆ ಗುರಿಯಾದ ಅಪರಾಧಿ. ಸಂತ್ರಸ್ತೆಯ ಸಂಬಂಧಿಕನಾದ ಈತ, 2015 ಅಕ್ಟೋಬರ್ 7 ರಂದು ಯುವತಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಅತ್ಯಾಚಾರವೆಸಗಿ ಜೀವ ಬೆದರಿಕೆ ಹಾಕಿದ್ದ. ಈ ಕುರಿತು ಮಂಜುನಾಥ ವಿರುದ್ಧ ಗುಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಆರೋಪ ಸಾಬೀತಾಗಿದ ಹಿನ್ನೆಲೆ ನ್ಯಾಯಾಧೀಶರು ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಗಿರಿಜಾ ಎಸ್ ವಾದ ಮಂಡಿಸಿದ್ದರು.

ಇದನ್ನೂ ಓದಿ:ಯುವತಿಯ ಹೊಟ್ಟೆಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿ

ABOUT THE AUTHOR

...view details