ಕರ್ನಾಟಕ

karnataka

ETV Bharat / state

ಧಾರವಾಡದಲ್ಲಿ 12 ಪ್ರಕರಣಗಳು ಪತ್ತೆ: 218ಕ್ಕೇರಿದ ಸೋಂಕಿತರ ಸಂಖ್ಯೆ - Dharwad corona news

ಧಾರವಾಡದಲ್ಲಿಂದು 12 ಕೊರೊನಾ ಪಾಸಿಟಿವ್​ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 218ಕ್ಕೆ ಏರಿಕೆಯಾಗಿದೆ.

ಕೋವಿಡ್ ಪ್ರಕರಣಗಳು
ಕೋವಿಡ್ ಪ್ರಕರಣಗಳು

By

Published : Jun 24, 2020, 11:28 PM IST

ಧಾರವಾಡ: ಜಿಲ್ಲೆಯಲ್ಲಿಂದು 12 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 218ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಂಪರ್ಕದಲ್ಲಿದ್ದ 9 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಇಬ್ಬರು ಸೋಂಕಿತರು ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿದ್ದರು. ‌ಒಬ್ಬ ಸೋಂಕಿತನ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.

ರೋಗಿ-8742 ರ ಸಂಪರ್ಕದಿಂದ ಇಂದು ನಾಲ್ಕು ಜನರಿಗೆ, ರೋಗಿ-8741 ರ ಸಂಪರ್ಕದಲ್ಲಿದ್ದ ನಾಲ್ವರಿಗೆ, ರೋಗಿ-7040 ರ ಸಂಪರ್ಕದಲ್ಲಿದ್ದ ಓರ್ವ ಮಹಿಳೆಗೆ ಸೋಂಕು ಕಾಣಿಸಿಕೊಂಡಿದೆ. ಇಂದು 7 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರಿಗೆ ಹುಬ್ಬಳ್ಳಿಯ ಕಿಮ್ಸ್​​​ನಲ್ಲಿ ಚಿಕಿತ್ಸೆ ಮುಂದುವರೆದಿದೆ.

ABOUT THE AUTHOR

...view details