ಹುಬ್ಬಳ್ಳಿ:ಮಹದಾಯಿ ನದಿ ನೀರು ಹಂಚಿಕೆ ಯೋಜನೆ ವಿಚಾರವಾಗಿ ಸರ್ವಪಕ್ಷದ ಜನಪ್ರತಿನಿಧಿಗಳು ಒಟ್ಟಾಗಿ ಸಮಸ್ಯೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗಿದೆ.
ನಗರದ ಸರ್ಕ್ಯೂಟ್ ಹೌಸ್ನಲ್ಲಿ ನಡೆದ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಜನಪ್ರತಿನಿಧಿಗಳ ಸಭೆ ಬಳಿಕ ಮಹದಾಯಿ ನದಿ ನೀರು ಹಂಚಿಕೆ ಯೋಜನೆ ವಿಚಾರವಾಗಿ ಮುಂದಿನ 15 ದಿನಗಳಲ್ಲಿ ಅಂತಿಮ ನಿರ್ಧಾರ ಪ್ರಕಟಿಸಬೇಕೆಂದು ಮಹದಾಯಿ ಅಚ್ಚುಕಟ್ಟಿನ ರೈತರು ಜನಪ್ರತಿನಿಧಿಗಳಿಗೆ ಗಡುವು ನೀಡಿದರು. ಈ ವೇಳೆ ರೈತರೊಂದಿಗೆ ಮಾತುಕತೆ ನಡೆಸಿದ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ, ಸಚಿವ ಜಗದೀಶ್ ಶೆಟ್ಟರ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮಹದಾಯಿ ಯೋಜನೆ ಜಾರಿ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ರು.
ಸರ್ವಪಕ್ಷದ ಜನಪ್ರತಿನಿಧಿಗಳು ಒಟ್ಟಾಗಿ ಮಹದಾಯಿ ವಿಚಾರಕ್ಕೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗಿದೆ. ಕೂಡಲೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಆದಷ್ಟು ಬೇಗ ಮಹದಾಯಿ ಸಮಸ್ಯೆ ಬಗೆಹರಿಸಲಾಗುವುದು ಎಂದು ರೈತರಿಗೆ ತಿಳಿಸಿದರು.