ಧಾರವಾಡ: ಜಿಲ್ಲೆಯಲ್ಲಿ ಇಂದು 199 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 14,418 ಕ್ಕೇರಿದೆ.
ಇದುವರೆಗೆ 11,723 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 2,273 ಪ್ರಕರಣಗಳು ಸಕ್ರಿಯವಾಗಿವೆ. 67 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.