ಧಾರವಾಡ: ಜಿಲ್ಲೆಯಲ್ಲಿ ಇಂದು 2 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಧಾರವಾಡದಲ್ಲಿ ಕೊರೊನಾ ಕಂಟಕ: ಇಂದು ಮತ್ತೆರಡು ಪ್ರಕರಣ ಪತ್ತೆ - Corona infection
ರಾಜ್ಯದಲ್ಲಿಂದು ದಾಖಲೆಯ ಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ದಾಖಲಾಗಿವೆ. ಅಲ್ಲದೆ ಧಾರವಾಡದಲ್ಲಿ ಇಂದು ಮತ್ತೆ 2 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಇಬ್ಬರೂ ಸಹ ರಾಜಸ್ಥಾನದಿಂದ ಬಂದಿದವರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದಾರೆ.

ಧಾರವಾಡದಲ್ಲಿ ಕೊರೊನಾ ಕಂಟಕ: ಇಂದು ಮತ್ತೆರಡು ಪ್ರಕರಣ ಪತ್ತೆ
ಪಿ-3436 (48 ವರ್ಷದ ಪುರುಷ) ಹಾಗೂ ಪಿ-3437 (66 ವರ್ಷದ ಮಹಿಳೆ) ಈ ಇಬ್ಬರೂ ರಾಜಸ್ಥಾನದ ಅಜ್ಮೀರ್ನಿಂದ ಹಿಂದಿರುಗಿರುವ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಅಲ್ಲದೆ ಇವರನ್ನು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು.
ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 50ಕ್ಕೆ ಏರಿಕೆಯಾಗಿದೆ. ಈಗಾಗಲೇ 26 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.