ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಇಂದು ಬರೋಬ್ಬರಿ 8 ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 281ಕ್ಕೆ ಏರಿಕೆಯಾಗಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಧಾರವಾಡದಲ್ಲಿ ಕೊರೊನಾಗೆ ಬರೋಬ್ಬರಿ 8 ಮಂದಿ ಬಲಿ....204 ಸೋಂಕಿತರು ಪತ್ತೆ - Deaths from corona
ಜಿಲ್ಲೆಯಲ್ಲಿಂದು 204 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 8 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 9,670 ಮತ್ತು ಮೃತರ ಸಂಖ್ಯೆ 281ಕ್ಕೆ ಏರಿಕೆಯಾಗಿದೆ.
Darwada corona cases
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಮತ್ತು ಮೃತ ಪ್ರಮಾಣ ದಿನೇ-ದಿನೆ ಏರಿಕೆ ಕಾಣುತ್ತಲೇ ಇದೆ. ಇಂದು 204 ಜನರಿಗೆ ಕೊರೊನಾ ತಗುಲುವ ಮೂಲಕ ಸೋಂಕಿತರ ಸಂಖ್ಯೆ 9,670ಕ್ಕೆ ಏರಿಕೆಯಾಗಿದೆ.
ಇಂದು 213 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 6,971 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 2,418 ಸಕ್ರಿಯ ಪ್ರಕರಣಗಳಿವೆ.