ಕರ್ನಾಟಕ

karnataka

ETV Bharat / state

ನಾಳೆ ದ್ವಿತೀಯ ಪಿಯುಸಿ ಇಂಗ್ಲಿಷ್​ ಪರೀಕ್ಷೆ: ಧಾರವಾಡ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ 21,294 ವಿದ್ಯಾರ್ಥಿಗಳು - ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ

ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ನಾಳೆಗೆ ನಿಗದಿ ಪಡಿಸಲಾಗಿದ್ದು, ಧಾರವಾಡ ಜಿಲ್ಲೆಯಲ್ಲಿ 38 ಪರೀಕ್ಷಾ ಕೇಂದ್ರಗಳನ್ನು ಸಿದ್ಧತೆ ಮಾಡಲಾಗಿದೆ. 21,294 ವಿದ್ಯಾರ್ಥಿಗಳು ‌ಪರೀಕ್ಷೆ ಬರೆಯಲಿದ್ದಾರೆ ಎಂದು ಧಾರವಾಡ ಜಿಲ್ಲಾ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

Dharwad
Dharwad

By

Published : Jun 17, 2020, 11:46 AM IST

ಹುಬ್ಬಳ್ಳಿ: ಲಾಕ್​ಡೌನ್ ಸಡಿಲಿಕೆ ಮಾಡಿದ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯನ್ನು ನಾಳೆಗೆ ನಿಗದಿ ಪಡಿಸಲಾಗಿದೆ. ಧಾರವಾಡ ಜಿಲ್ಲೆಯಲ್ಲಿ 38 ಪರೀಕ್ಷಾ ಕೇಂದ್ರಗಳನ್ನು ಸಿದ್ಧತೆ ಮಾಡಲಾಗಿದ್ದು, 21,294 ವಿದ್ಯಾರ್ಥಿಗಳು ‌ಪರೀಕ್ಷೆ ಬರೆಯಲಿದ್ದಾರೆ ಎಂದು ಧಾರವಾಡ ಜಿಲ್ಲಾ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ಈಗಾಗಲೇ 38 ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡುವ ಮೂಲಕ ಸಿದ್ಧಪಡಿಸಲಾಗಿದೆ. ಹಳ್ಳಿಗಳಿಂದ ಬರುವ ಮಕ್ಕಳಿಗೆ ಸಾರಿಗೆ ಸಂಸ್ಥೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.

ಹೊರ ಜಿಲ್ಲೆಯ 224 ವಿದ್ಯಾರ್ಥಿಗಳು, ಮಹಾರಾಷ್ಟ್ರದ ಇಬ್ಬರು , ಗೋವಾ 1, ತಮಿಳುನಾಡಿನ ಒಬ್ಬ ವಿದ್ಯಾರ್ಥಿ ಧಾರವಾಡ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ.

ABOUT THE AUTHOR

...view details