ಧಾರವಾಡ: ಜಿಲ್ಲೆಯಲ್ಲಿ ಹೊಸದಾಗಿ 290 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 10,736ಕ್ಕೆ ಏರಿದೆ.
ಧಾರವಾಡ: 290 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ - ಧಾರವಾಡ ಕೋವಿಡ್ ಪಾಸಿಟಿವ್ ಪ್ರಕರಣ
ಪೇಡಾ ನಗರಿ ಧಾರವಾಡ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾದ ಕೊರೊನಾ ವೈರಸ್ ಪ್ರಕರಣ ಕುರಿತಾದ ಮಾಹಿತಿ ಇಲ್ಲಿದೆ.
ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ
ಜಿಲ್ಲೆಯಲ್ಲಿ 8,132 ಜನ ಕೊರೊನಾ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2,297 ಸೋಂಕಿತ ಪ್ರಕರಣಗಳು ಸಕ್ರಿಯವಾಗಿವೆ.
ಜಿಲ್ಲೆಯಲ್ಲಿ 74 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 307 ಜನ ಕೋವಿಡ್ನಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.