ಕರ್ನಾಟಕ

karnataka

ETV Bharat / state

ನಿತ್ಯ ಸರಾಸರಿ 30 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಕೇಂದ್ರ ಸಚಿವ ಪ್ರಹ್ಲಾದ್​​​ ಜೋಶಿ - Dharwad Latest Update News

ಕರ್ನಾಟಕ ರಾಜ್ಯಕ್ಕೆ ಪ್ರಸಕ್ತ ಸಾಲಿನಲ್ಲಿ 2000 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪಡಿಸಲು ತಾತ್ವಿಕ ಒಪ್ಪಿಗೆ ದೊರೆತಿರುವುದು ಸಂತಸ ತಂದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

Dharwad
ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮ

By

Published : Dec 19, 2020, 5:56 PM IST

ಧಾರವಾಡ: ಕೇಂದ್ರ ಸರ್ಕಾರ ದೇಶದ ವಿವಿಧ ರಾಜ್ಯ ಸರ್ಕಾರದ ಸಹಯೋಗದಲ್ಲಿ ನಿತ್ಯ ಸುಮಾರು 30 ಕಿ.ಮೀ.ಗೂ ಅಧಿಕ ರಾಷ್ಟ್ರೀಯ ಹೆದ್ದಾರಿ ನಿರ್ಮಿಸುತ್ತಿದೆ. ಕರ್ನಾಟಕ ರಾಜ್ಯಕ್ಕೆ ಪ್ರಸಕ್ತ ಸಾಲಿನಲ್ಲಿ 2000 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪಡಿಸಲು ತಾತ್ವಿಕ ಒಪ್ಪಿಗೆ ದೊರೆತಿರುವುದು ಸಂತಸ ತಂದಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್​ ಜೋಶಿ ಹೇಳಿದರು.

ಭಾರತ ಸರ್ಕಾರದ ಭೂಸಾರಿಗೆ ಮತ್ತು ಹೆದ್ದಾರಿಗಳ ಮಂತ್ರಾಲಯ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆಯ ಸಹಯೋಗದಲ್ಲಿ ಇಂದು ವರ್ಚುವಲ್ ವೇದಿಕೆಯ (ಆನ್‍ಲೈನ್) ಮೂಲಕ ಆಯೋಜಿಸಿದ್ದ ವಿವಿಧ 33 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿ ಅವರು ತಮ್ಮ ಇಲಾಖೆಯಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ. ಹೆದ್ದಾರಿಗಳ ಅಭಿವೃದ್ಧಿ ಬಗ್ಗೆ ಅಪಾರ ಜ್ಞಾನ ಹೊಂದಿದ್ದಾರೆ. ಹೆದ್ದಾರಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ದೇಶದ ಭವಿಷ್ಯದ ದೂರದೃಷ್ಟಿಯೊಂದಿಗೆ ಅನುಷ್ಠಾನಗೊಳಿಸುತ್ತಿದ್ದಾರೆ. ಇದಕ್ಕಾಗಿಯೇ ಹೊಸ ನೀತಿ ರೂಪಿಸಿದ್ದಾರೆ. ಈ ಹೊಸ ನೀತಿಗೆ ಎಲ್ಲ ರಾಜ್ಯ ಸರ್ಕಾರಗಳ ಸಹಕಾರ ಮುಖ್ಯವಾಗಿದೆ. ಇವರ ಅವಧಿಯಲ್ಲಿ ಕರ್ನಾಟಕ ಮತ್ತು ದಕ್ಷಿಣ ಭಾರತದ ಅನೇಕ ರಾಜ್ಯಗಳಿಗೆ ಮಹತ್ವದ ಯೋಜನೆಗಳು ಅನುಷ್ಠಾನವಾಗಿವೆ. ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ಜಂಕ್ಷನ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಬಹುತೇಕ ಒಪ್ಪಿಗೆ ನೀಡಿರುವುದು ಅಭಿನಂದನೀಯ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ, ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೆಗೌಡ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ABOUT THE AUTHOR

...view details