ಧಾರವಾಡ :ಎಸ್ಡಿಎಂ ಮೆಡಿಕಲ್ ಕಾಲೇಜಿನಲ್ಲಿ 306 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಎಲ್ಲರೂ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ನವೆಂಬರ್ 24 ರಿಂದ 26 ರವರೆಗೆ ಕಾಣಿಸಿಕೊಂಡಿದ್ದ 306 ಪ್ರಕರಣದಲ್ಲಿ ಎಲ್ಲರೂ ಗುಣಮುಖರಾಗಿದ್ದಾರೆ. ಕೆಲವರು ಈಗಾಗಲೇ ತಮ್ಮ ಊರಿಗೆ ಕೂಡಾ ಹೋಗಿದ್ದಾರೆ. ಜಿಲ್ಲೆಯಲ್ಲಿ ಕೊವೀಡ್ ಪ್ರಕರಣ ಕಡಿಮೆಯಾಗಿವೆ. ಸದ್ಯ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣ 57 ಇವೆ, ಇಂದು 2 ಪ್ರಕರಣಗಳು ಪತ್ತೆಯಾಗಿವೆ. ಹೊರ ದೇಶದಿಂದ ಬಂದಿದ್ದ ಒಬ್ಬರಿಗೆ ಪಾಸಿಟಿವ್ ಬಂದಿದೆ ಎಂದು ಮಾಹಿತಿ ನೀಡಿದರು.