ಧಾರವಾಡ: ಜಿಲ್ಲೆಯಲ್ಲಿ ಇಂದು 318 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 13,340 ಕ್ಕೇರಿದೆ.
ಧಾರವಾಡ ಜಿಲ್ಲೆಯಲ್ಲಿ ಇಂದು 318 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆ... - ಧಾರವಾಡ ಕೊರೊನಾ ಸುದ್ದಿ
ಧಾರವಾಡ ಜಿಲ್ಲೆಯಲ್ಲಿ ಇಂದು 318 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 13,340 ಕ್ಕೇರಿದೆ.
![ಧಾರವಾಡ ಜಿಲ್ಲೆಯಲ್ಲಿ ಇಂದು 318 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆ... Dharwad](https://etvbharatimages.akamaized.net/etvbharat/prod-images/768-512-8731062-415-8731062-1599585836139.jpg)
ಜಿಲ್ಲಾಧಿಕಾರಿ ನಿತೇಶ್ ಪಾಟೀಲ್
ಇದುವರೆಗೆ 10,502 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2,450 ಪ್ರಕರಣಗಳು ಸಕ್ರಿಯವಾಗಿವೆ. 68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 388 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.
ಧಾರವಾಡ ಹೊರತುಪಡಿಸಿ ಗದಗ, ಬೆಳಗಾವಿ, ಹಾವೇರಿ, ಕೊಪ್ಪಳ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಪ್ರಕರಣಗಳು ಪತ್ತೆಯಾಗಿವೆ.