ಹುಬ್ಬಳ್ಳಿ: ಫೆ.1ರಂದು ಎಐಟಿಯುಸಿ ಸಂಘಟಿತ ರಾಜ್ಯಮಟ್ಟದ ಸಮ್ಮೇಳನವನ್ನು ಬೆಂಗಳೂರಿನ ಸಿರೂರ್ ಪಾರ್ಕ್, ಮಲ್ಲೇಶ್ವರಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಹೇಳಿದರು.
ಫೆ.1ರಂದು ಎಐಟಿಯುಸಿ 3ನೇ ರಾಜ್ಯಮಟ್ಟದ ಸಮ್ಮೇಳನ
ಎಐಟಿಯುಸಿ ಸಂಘಟಿತ ರಾಜ್ಯಮಟ್ಟದ ಸಮ್ಮೇಳನ ಫೆ.1ರಂದು ಬೆಂಗಳೂರಿನ ಸಿರೂರ್ ಪಾರ್ಕ್, ಮಲ್ಲೇಶ್ವರಂನಲ್ಲಿ ಆಯೋಜಿಸಲಾಗಿದ್ದು, ಕಾರ್ಮಿಕರ ಸಮಸ್ಯೆಯನ್ನು ಆದಷ್ಟು ತ್ವರಿತಗತಿಯಲ್ಲಿ ಪರಿಹರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದೆಂದು ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿ. ನಾಗಲಕ್ಷ್ಮಿ, ರಾಜ್ಯಮಟ್ಟದ ಸಮ್ಮೇಳನದಲ್ಲಿ ದೇಶದ ಆರ್ಥಿಕ ಬಿಕ್ಕಟ್ಟಿನಿಂದ ಉದ್ಭವಿಸುವ ಸಮಸ್ಯೆಗಳು, ಪರಿಹಾರ, ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿರುವ ಕಾರ್ಮಿಕ ಚಳುವಳಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ದುಡಿಯುವ ಜನರ ಹಾಗೂ ಗುತ್ತಿಗೆ ಕಾರ್ಮಿಕರ ಸಮಸ್ಯೆಗಳ ಮನವರಿಕೆ, ಅವರ ಸೇವೆ ಖಾಯಂಗೊಳಿಸುವುದು,ಅಲ್ಲಿಯವರೆಗೂ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸುವುದು ಹಾಗು ಆಶಾ ಕಾರ್ಯಕರ್ತೆಯರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಒತ್ತಾಯಿಸಲಾಗುತ್ತದೆ ಎಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಸಂಘಟನೆಯ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.