ಹುಬ್ಬಳ್ಳಿ:ಧಾರವಾಡ ಜಿಲ್ಲೆಯಲ್ಲಿ ಕಳೆದ 10 ದಿನಗಳ ಅಂತರದಲ್ಲಿ ಒಂದೇ ಕುಟುಂಬದ ನಾಲ್ವರು ಕೊರೊನಾಗೆ ಬಲಿಯಾಗಿದ್ದಾರೆ.
ಒಂದೇ ಕುಟುಂಬದ ನಾಲ್ವರನ್ನು ಬಲಿ ಪಡೆದ ಕೊರೊನಾ ಮಹಾಮಾರಿ - died between 10 days in dharwad
ಧಾರವಾಡದಲ್ಲಿ ಒಂದೇ ಕುಟುಂಬದ ನಾಲ್ವರು 10 ದಿನಗಳ ಅಂತರದಲ್ಲಿ ಕೋವಿಡ್ ಮಹಾಮಾರಿಗೆ ಬಲಿಯಾಗಿದ್ದರೆ. ಇದೇ ಕುಟುಂಬ ಮತ್ತೋರ್ವ ವೃದ್ಧ ಚಿಕಿತ್ಸೆ ಪಡೆಯುತ್ತಿದ್ದು, ಕುಟುಂಬ ಆತಂಕದಲ್ಲಿದೆ.
ಕುಂದಗೋಳ ತಾಲೂಕಿನ ಚಿಕ್ಕಗುಂಜಳ ಗ್ರಾಮದ ಒಂದೇ ಕುಟುಂಬದ ಮೂವರು ಸಹೋದರರು ಹಾಗೂ ತಾಯಿ ಮೃತಪಟ್ಟಿದ್ದಾರೆ. ಇದೇ ಕುಟುಂಬದ 80 ವರ್ಷದ ನಿವೃತ್ತ ಶಿಕ್ಷಕರಿಗೆ ಮೊದಲು ಕೊರೊನಾ ಕಾಣಿಸಿಕೊಂಡಿತ್ತು. ಬಳಿಕ ಇವರ ಪತ್ನಿ ಶಾಂತಮ್ಮ ಉಸಿರಾಟದ ತೊಂದರೆಯಿಂದ ಕೋವಿಡ್ಗೆ ಬಲಿಯಾದರು.
ನಂತರ ಮನೆಯ ಹಿರಿಯ ಮಗ ಮಂಜುನಾಥ ಹಾಗೂ ಇಬ್ಬರು ಕಿರಿಯ ಸಹೋದರರಾದ ಅರವಿಂದ ಹಾಗೂ ಸುರೇಶ ಸಹ ಕೋವಿಡ್ನಿಂದ ಸಾವನ್ನಪ್ಪಿದ್ದಾರೆ. ತಾಯಿ ಹಾಗೂ ಮೂವರು ಮಕ್ಕಳು ಮೃತಪಟ್ಟಿದ್ದು ತಂದೆ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯ ನಾಲ್ವರನ್ನು ಕಳೆದುಕೊಂಡ ಕುಟುಂಬಕ್ಕೆ ದಿಕ್ಕು ತೋಚದಂತಾಗಿದೆ.