ಹುಬ್ಬಳ್ಳಿ: 40% ಕಮಿಷನ್ ಆರೋಪದ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಿದೆ. ಇದೆಲ್ಲ ಕಾಂಗ್ರೆಸ್ ಷಡ್ಯಂತ್ರ. ತನಿಖೆಯ ನಂತರ ಎಲ್ಲವೂ ಹೊರಬರಲಿದೆ. ಕಾಂಗ್ರೆಸ್ ನಾಯಕರು ಜನರನ್ನು ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಮಿಷನ್ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
40% ಕಮಿಷನ್ ಕಾಂಗ್ರೆಸ್ ಷಡ್ಯಂತ್ರ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
ಕಾಂಗ್ರೆಸ್ ಪಕ್ಷದ ಕಮಿಷನ್ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಅರುಣ್ ಸಿಂಗ್
ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಹೊಸಪೇಟೆಯಲ್ಲಿ ರಾಜ್ಯ ಕಾರ್ಯಕಾರಣಿ ನಡೆಯುತ್ತಿದೆ. ಮೊದಲ ಬಾರಿಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮಿಸುತ್ತಿದ್ದಾರೆ. ಸಭೆಯಲ್ಲಿ ಸಾಕಷ್ಟು ವಿಚಾರಗಳು ಚರ್ಚೆಗೆ ಬರಲಿವೆ ಎಂದರು.
ಇದನ್ನೂ ಓದಿ:ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿಂದೆ ಅನುಮಾನದ ಹುತ್ತ ಬೆಳೆದಿದೆ : ಸಿ.ಟಿ ರವಿ