ಧಾರವಾಡ:ಜಿಲ್ಲೆಯಲ್ಲಿ ಇಂದು 50 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 882ಕ್ಕೆ ಏರಿಕೆಯಾಗಿದೆ. 17 ಜನರಲ್ಲಿ ಐಎಲ್ಐ ಕಾರಣ ಪರೀಕ್ಷಿಸಿದಾಗ ಸೋಂಕು ದೃಢಪಟ್ಟಿದೆ.
50 ಮಂದಿಗೆ ಕೊರೊನಾ ಪಾಸಿಟಿವ್, ಇಬ್ಬರು ಸಾವು - Positive Case In Dharwad
13 ಜನ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಉಳಿದ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ..

ಧಾರವಾಡದಲ್ಲಿ 50 ಕೊರೊನಾ ಪಾಸಿಟಿವ್ ಕೇಸ್ ದೃಢ
SARI ತೊಂದರೆಯಿಂದ ಇಬ್ಬರಿಗೆ ಸೋಂಕು ತಗುಲಿದೆ. ಹಾಗೂ 30 ಮಂದಿ ಸೋಂಕಿತರ ಸಂಪರ್ಕವನ್ನು ಪತ್ತೆ ಹಚ್ಚಲಾಗುತ್ತಿದೆ. ಅಂತಾರಾಷ್ಟ್ರೀಯ ಪ್ರವಾಸದಿಂದ ಒಬ್ಬರಿಗೆ ಸೋಂಕು ಕಾಣಿಸಿದೆ. ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಇದರಿಂದ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಪಿ - 25518, 40 ವರ್ಷದ ಪುರುಷ ಹಾಗೂ ಪಿ -30715 60 ವರ್ಷದ ಪುರುಷ ಮೃತಪಟ್ಟಿದ್ದಾರೆ. 13 ಜನ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಉಳಿದ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.