ಹುಬ್ಬಳ್ಳಿ:ಕೊರೊನಾ ಚಿಕಿತ್ಸೆ ಪರಿಕರಗಳಿಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ, ಇಂಡಿಯನ್ ಆಯಿಲ್ ಕಾರ್ಪೊರೇಶನ್ 50 ಲಕ್ಷ ರೂಪಾಯಿ ನೆರವು ನೀಡಿದ್ದು, ಕಂಪನಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡ ಸಚಿವರು, ಉತ್ತರ ಕರ್ನಾಟಕದ ಪ್ರತಿಷ್ಠಿತ ಸಂಸ್ಥೆಯಾದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಕೋವಿಡ್-19 ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅದಕ್ಕೆ ಅನುಗುಣವಾಗಿ ಅವಶ್ಯಕ ಐಸಿಯು, ಬೆಡ್, ವೆಂಟಿಲೇಟರ್ ಹಾಗೂ ಇತರೆ ವೈದ್ಯಕೀಯ ಪರಿಕರಗಳನ್ನು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸ್ವಾಮ್ಯದ ಹಾಗೂ ಖಾಸಗಿ ಕಂಪನಿಗಳನ್ನು ಕೇಳಿಕೊಂಡ ಪ್ರಯುಕ್ತ ಜಿಲ್ಲಾಡಳಿತದ ಮೂಲಕ ಐಒಸಿಎಲ್ ಕಂಪನಿಗೆ ಪ್ರಸ್ತಾವನೆಯನ್ನು ಸಲ್ಲಿಸಲು ಸೂಚಿಸಿದ್ದೆ ಎಂದು ತಿಳಿಸಿದ್ದಾರೆ.