ಕರ್ನಾಟಕ

karnataka

ETV Bharat / state

ಧಾರವಾಡದಲ್ಲಿ ಕೊರೊನಾಗೆ ಮೊದಲ ಬಲಿ.. 58 ವರ್ಷದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು - Dharwad covid 19 death news

ಕಳೆದ 14 ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 58 ವರ್ಷದ ವ್ಯಕ್ತಿ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

Hubli kims hospital
Hubli kims hospital

By

Published : Jun 10, 2020, 3:32 PM IST

ಹುಬ್ಬಳ್ಳಿ: ಕೋವಿಡ್-19 ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇಂದು ಕೊರೊನಾಗೆ ಧಾರವಾಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ.

ಹುಬ್ಬಳ್ಳಿಯ ಗಿರಿಣಿಚಾಳದ 58 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಕಳೆದ 14 ದಿನಗಳಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು, ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತನ ಕುಟುಂಬದ ಇತರೆ ಸದಸ್ಯರಿಗೂ ಕೂಡ ಕೊರೊನಾ ಸೋಂಕು ತಗುಲಿತ್ತು. ಎಲ್ಲರೂ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

ನಿಯಮಾನುಸಾರ ಮೃತನ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದು, ಈ ಕುರಿತು ಜಿಲ್ಲಾಡಳಿತ ಇನ್ನೂ ಅಧಿಕೃತವಾಗಿ ಘೋಷಣೆ ಮಾಡಿಲ್ಲ.

ABOUT THE AUTHOR

...view details