ಧಾರವಾಡ: ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ನಿನ್ನೆ ಒಂದೇ ದಿನ 62 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.
ಈ ಪೈಕಿ 12 ಮಂದಿಯನ್ನು ಕೋವಿಡ್ ಕೇರ್ ಸೆಂಟರ್ಗೆ ದಾಖಲಿಸಲಾಗಿದ್ದು, ಉಳಿದವರು ಕೋವಿಡ್ ಕೇರ್ ಸೆಂಟರ್ಗೆ ತೆರಳಲು ನಿರಾಕರಿಸಿದ್ದಾರೆ. ಹಾಗಾಗಿ, ಬೇರೆ ದಾರಿ ಕಾಣದೆ ಜಿಲ್ಲಾಡಳಿತ ಸಿದ್ದೇಶ್ವರ ಕಾಲೋನಿಯ ರಸ್ತೆಗಳನ್ನು ಬಂದ್ ಮಾಡಿ ಕಂಟೈನ್ಮೆಂಟ್ ಝೋನ್ ಆಗಿ ಘೋಷಿಸಿದೆ.