ಧಾರವಾಡ: ಕೊರೊನಾ ಹಿನ್ನೆಲೆ ಜಿಲ್ಲಾಡಳಿತದಿಂದ ಸರಳ ರಾಜ್ಯೋತ್ಸವ ಆಚರಣೆ - 65th kannada rajyostav
ಧಾರವಾಡದ ಆರ್.ಎನ್. ಶೆಟ್ಟಿ ಮೈದಾನದಲ್ಲಿಂದು ಸರಳವಾಗಿ 65ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯ್ತು. ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಕರ್ನಾಟಕ ಏಕಿಕರಣಕ್ಕೆ ಹೋರಾಡಿದ ಮಹನೀಯರು ಮತ್ತು ಪ್ರಸ್ತುತ ಕೊರೊನಾ ವಿರುದ್ಧ ಹೋರಾಡುತ್ತಿರುವ ವಾರಿಯರ್ಸ್ಅನ್ನು ಸ್ಮರಿಸಿದರು.
65ನೇ ಕನ್ನಡ ರಾಜ್ಯೋತ್ಸವ
ಧಾರವಾಡ: ಕೊರೊನಾ ಹಿನ್ನೆಲೆ ಈ ಬಾರಿ ಕರ್ನಾಟಕ ರಾಜ್ಯೋತ್ಸವವನ್ನು ಸರಳವಾಗಿ ಆಚರಣೆ ಮಾಡಲಾಯಿತು. 65ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಕೊರೊನಾ ವೈರಸ್ ವಿರುದ್ಧ ಭಾರತವೂ ಸೇರಿದಂತೆ ಇಡೀ ಜಗತ್ತು ಹೋರಾಟ ನಡೆಸುತ್ತಿರುವ ಸಂದರ್ಭದಲ್ಲಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಸಾಮಾಜಿಕ ಅಂತರ ಮತ್ತಿತರ ಮುನ್ನೆಚ್ಚರಿಕೆ ಕ್ರಮಗಳ ಪಾಲನೆಯೊಂದಿಗೆ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಿದ್ದೇವೆ ಎಂದ್ರು. ಇನ್ನು ಕೋವಿಡ್ ವಿರುದ್ಧ ನಿರಂತರವಾಗಿ ಹೋರಾಡುತ್ತಿರುವ ವೈದ್ಯರು, ನರ್ಸಿಂಗ್ ಸಿಬ್ಬಂದಿ, ಪೌರಕಾರ್ಮಿಕರು, ಅಧಿಕಾರಿಗಳು, ಪೊಲೀಸರು ಸೇರಿದಂತೆ ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಹಾಗೂ ಜಿಲ್ಲೆಯ ಜನತೆಗೆ ರಾಜ್ಯೋತ್ಸವ ಹಬ್ಬದ ಶುಭಾಶಯ ತಿಳಿಸಿದರು.