ಹುಬ್ಬಳ್ಳಿ: ಧಾರವಾಡ ಜಿಲ್ಲಾ ವ್ಯಾಪ್ತಿಯ ವಿವಿಧ ತಾಲೂಕಿನಲ್ಲಿ ಸುರಿದ ಮಳೆಗೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಗೆ 94,96 ಲಕ್ಷ ರೂ. ನಷ್ಟ ಉಂಟಾಗಿದೆ. ಅತಿವೃಷ್ಟಿಯಿಂದ ಏಪ್ರಿಲ್ 1ರಿಂದ ಆಗಸ್ಟ್ 31ರವರೆಗೆ 1,549 ವಿದ್ಯುತ್ ಕಂಬ, 33 ವಿದ್ಯುತ್ ಪರಿವರ್ತಕಗಳು (ಟಿಸಿ) ಹಾಳಾಗಿವೆ. ಸತತ ಮಳೆ ಸುರಿದರೂ ಯಾವುದೇ ಗ್ರಾಮ ಕತ್ತಲೆಯಲ್ಲಿ ಮುಳುಗಿಲ್ಲ ಎಂಬುದು ಸಮಾಧಾನದ ಸಂಗತಿ.
ನವಲಗುಂದ, ಅಣ್ಣಿಗೇರಿ ಭಾಗದಲ್ಲಿ ಸತತ ಮಳೆ ಸುರಿದರೂ ಕಡಿಮೆ ಪ್ರಮಾಣದಲ್ಲಿ ವಿದ್ಯುತ್ ಉಪಕರಣಗಳಿಗೆ ಧಕ್ಕೆಯಾಗಿದೆ. ಧಾರವಾಡ, ಹುಬ್ಬಳ್ಳಿ, ಶಹರ, ಕಲಘಟಗಿ, ಕುಂದಗೋಳ ಭಾಗದಲ್ಲಿ ವಿದ್ಯುತ್ ಕಂಬಗಳು ಹೆಚ್ಚಿನ ಸಂಖ್ಯೆಯಲ್ಲಿ ನೆಲಕ್ಕುರುಳಿವೆ.