ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ ಚಾಕು ಇರಿತ ಪ್ರಕರಣ: ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಸಾವು - A boy killed by knife stabling in hubbali

ಹುಬ್ಬಳ್ಳಿಯಲ್ಲಿ ಗಣೇಶ ನಿಮಜ್ಜನ ವೇಳೆ ಚಾಕು ಇರಿತಕ್ಕೊಳಗಾಗಿ ಗಾಯಗೊಂಡಿದ್ದ ವಿದ್ಯಾರ್ಥಿವೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಯುವಕ ಸಾವು

By

Published : Sep 13, 2019, 1:21 PM IST

ಹುಬ್ಬಳ್ಳಿ: ಗಣೇಶ ನಿಮಜ್ಜನ ವೇಳೆ ದುಷ್ಕರ್ಮಿಗಳಿಂದ ಚಾಕು ಇರಿತಕ್ಕೊಳಗಾಗಿದ್ದ ವಿದ್ಯಾರ್ಥಿವೋರ್ವ ನಗರದ ಕಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾನೆ.

ಬಸವರಾಜ್ ವಿರೇಶ್​ ಶಿವೂರ (21) ಸಾವನ್ನಪ್ಪಿರುವ ವಿದ್ಯಾರ್ಥಿ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದ ನಿವಾಸಿಯಾಗಿದ್ದ ಈತ, ಹುಬ್ಬಳ್ಳಿಯ ಕೆಎಲ್‌ಇ ಕಾಲೇಜಿನಲ್ಲಿ ನರ್ಸಿಂಗ್ ಓದುತ್ತಿದ್ದ.

ಉಳಿದ ಐವರಿಗೆ ಗಾಯಾಳುಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ

ಅಷ್ಟಕ್ಕೂ ಆಗಿದ್ದೇನು?

ನಿನ್ನೆ ಗೆಳೆಯರೊಂದಿಗೆ ಗಣೇಶ ನಿಮಜ್ಜನ ನೋಡಲು ಬಂದಿದ್ದ ಬಸವರಾಜ್ ​ಹಾಗೂ ಆತನ ಸ್ನೇಹಿತರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದರು. ನಗರದ ಐದು ಕಡೆ ಹಿಂಬಾಲಿಸಿ ದುಷ್ಕರ್ಮಿಗಳು ಚಾಕುವಿನಲ್ಲಿ ಇರಿದಿದ್ದಾರೆ. ನಗರದ ಹರ್ಷ ಕಾಂಪ್ಲೆಕ್ಸ್, ದುರ್ಗದ ಬೈಲ್, ಸಂಗೊಳ್ಳಿ ರಾಯಣ್ಣ ವೃತ್ತ, ಹಳೆ ಹುಬ್ಬಳ್ಳಿಯಲ್ಲಿ ಚಾಕು ಇರಿತವಾಗಿದೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬಸವರಾಜ್​ನನ್ನು ಸ್ಥಳೀಯರು ಕಿಮ್ಸ್​​ಗೆ ದಾಖಲಿಸಿದ್ದರು. ಇನ್ನುಳಿದ ಐವರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದಿದೆ.

ಈ ಕುರಿತು ಶಹರ್​ ಉಪನಗರ, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ABOUT THE AUTHOR

...view details