ಹುಬ್ಬಳ್ಳಿ: ಸಾಲಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಘಟಗಿ ತಾಲೂಕಿನ ನೆಲ್ಲಿ ಹರವಿ ಗ್ರಾಮದಲ್ಲಿ ನಡೆದಿದೆ.
ಕಲಘಟಗಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ - Hubli farmer suicide news
ಸಾಲ ತೀರಿಸಲಾಗದೆ ಮನನೊಂದು ರೈತನೊಬ್ಬ ತನ್ನ ಹೊಲದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದಲ್ಲಿ ನಡೆದಿದೆ.
ರೈತ ಆತ್ಮಹತ್ಯೆ
ಬಸಪ್ಪ ಮುದಕಪ್ಪ (ಮರಬಸಪ್ಪ ) ಮಡಿವಾಳರ (40) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ಎರಡು ಎಕರೆ ಜಮೀನು ಹೊಂದಿದ್ದು, ಮೂರು ವರ್ಷಗಳ ಹಿಂದೆ ಕೆವಿಜಿ ಬ್ಯಾಂಕ್ನಲ್ಲಿ ಒಂದೂವರೆ ಲಕ್ಷ ರೂಪಾಯಿ ಬೆಳೆ ಸಾಲ ಮಾಡಿಕೊಂಡಿದ್ದರು. ಆದರೆ ಮಾಡಿದ ಸಾಲ ತೀರಿಸಲಾಗದೆ ಮನನೊಂದು ತನ್ನ ಹೊಲದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.