ಹುಬ್ಬಳ್ಳಿ: ಕೊರೊನಾ ಹಾವಳಿ ದಿನೇ ದಿನೆ ಹೆಚ್ಚುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ಜಿಲ್ಲೆಯ ಗಣೇಶ ಪೇಟೆ ಯುವಕರ ತಂಡವೊಂದು ನಿರ್ಗತಿಕರಿಗೆ ಹಾಗೂ ಪ್ರಯಾಣಿಕರು, ಭಿಕ್ಷುಕರ ಹಸಿವನ್ನು ನೀಗಿಸುವ ಕೆಲಸ ಮಾಡುತ್ತಿದೆ. ಇವರ ಕಾರ್ಯಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.
ಕೊರೊನಾ ಭೀತಿಯಿಂದ ದೇಶದಲ್ಲಿ ಮುಂಜಾಗ್ರತಾ ಕ್ರಮವಾಗಿ ಅನೇಕ ಕ್ರಮಗಳನ್ನು ತೆಗೆದುಕೊಂಡು ಅವುಗಳನ್ನು ಜಾರಿ ಮಾಡಲಾಗುತ್ತಿದ್ದು, ರಾಜ್ಯದ 9 ಜಿಲ್ಲೆಗಳನ್ನು ಲಾಕ್ ಡೌನ್ ಮಾಡಲಾಗಿದೆ. ಈ ವೇಳೆ ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ಎಲ್ಲಾ ವಾಣಿಜ್ಯ ಮಳಿಗೆಗಳು ಆಯಾ ಜಿಲ್ಲೆಗಳ ಜಿಲ್ಲಾಡಳಿತದ ಆದೇಶದಂತೆ ಬಂದ್ ಆಗಿವೆ. ಅದರಂತೆ ಧಾರವಾಡ ಜಿಲ್ಲೆಯಲ್ಲೂ ಕೊರೊನಾ ವೈರಸ್ ವ್ಯಕ್ತಿವೋರ್ವನಲ್ಲಿ ದೃಢಪಟ್ಟ ಹಿನ್ನೆಲೆ ಜಿಲ್ಲೆಯನ್ನು ಮಾ. 31ರವರೆಗೆ ಲಾಕ್ ಡೌನ್ ಮಾಡಲಾಗಿದೆ.