ಕರ್ನಾಟಕ

karnataka

ETV Bharat / state

ನಿಯಂತ್ರಣ ತಪ್ಪಿ ಜೆಸಿಬಿಗೆ ಡಿಕ್ಕಿ ಹೊಡೆದ ಬೈಕ್ .. ಓರ್ವ ಸಾವು, ಇನ್ನೋರ್ವನಿಗೆ ಗಂಭೀರ ಗಾಯ - ಬೈಕ್ ಚಾಲನೆ ನಿಯಂತ್ರಣ ತಪ್ಪಿ ಜೆಸಿಬಿಗೆ ಡಿಕ್ಕಿ

ಹುಬ್ಬಳ್ಳಿಯಲ್ಲಿ ಅತಿವೇಗದ ವಾಹನ ಚಾಲನೆಯಿಂದ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ.

bike accident in hubli
ಹುಬ್ಬಳ್ಳಿಯಲ್ಲಿ ರಸ್ತೆ ಅಪಘಾತ

By

Published : Dec 20, 2022, 7:03 PM IST

ಹುಬ್ಬಳ್ಳಿ:ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಜೆಸಿಬಿಗೆ ಬೈಕ್ ಡಿಕ್ಕಿ ‌ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರವಾರ ರಸ್ತೆಯ ಇರ್ಫಾನ್ ಐಸ್ ಫ್ಯಾಕ್ಟರಿ ಮುಂದೆ ನಡೆದಿದೆ.

ಅಂಚಟಗೇರಿಯಿಂದ ಅತಿವೇಗವಾಗಿ ಬೈಕ್ ಚಲಾಯಿಸಿಕೊಂಡ ಬಂದ ಬೈಕ್ ಸವಾರ, ನಿಯಂತ್ರಣ ತಪ್ಪಿ ರಸ್ತೆಯ ತಿರುವಿನಲ್ಲಿ ನಿಂತಿದ್ದ ಜೆಸಿಬಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್​ಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ. ಅಲ್ಲದೇ ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೇ, ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಲೇ ಗಾಯಾಳುವನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆಗೆ ಬೈಕ್ ಸವಾರನ ಅಜಾಗರೂಕತೆ ಚಾಲನೆ ಹಾಗೂ ಅತಿಯಾದ ವೇಗವೇ ಕಾರಣ ಎನ್ನಲಾಗ್ತಿದೆ. ಈ ಸಂಬಂಧ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಓವರ್​ ಟೇಕ್​ ಮಾಡಲು ಹೋಗಿ ಭೀಕರ ಅಪಘಾತ: 3 ಸಾವು, 13 ಜನರಿಗೆ ಗಾಯ

ABOUT THE AUTHOR

...view details