ನವಲಗುಂದ(ಧಾರವಾಡ):ಕುಡಿದ ನಶೆಯಲ್ಲಿ ವ್ಯಕ್ತಿಯೊಬ್ಬ ಹೆಂಡತಿ ಹಾಗೂ ಮಗಳಿಗೆ ಬೆಂಕಿ ಹಚ್ಚಿದ್ದು, ಬಳಿಕ ತಾನೂ ಸುಟ್ಟುಕೊಂಡು ಆತ್ಮಹತ್ಯೆಗೆ ಶರಣಗಾಗಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ನಡೆದಿದೆ.
ಕುಡಿದ ಮತ್ತಿನಲ್ಲಿದ್ದ ಬೀರಪ್ಪ ಕಟಿಗಾರ (40 ) ತನ್ನ ಪತ್ನಿ ಫಕ್ಕೀರವ್ವ (34) ಹಾಗೂ 12 ವರ್ಷದ ಮಗಳಿಗೆ ಬೆಂಕಿ ಹಚ್ಚಿದ್ದಾನೆ. ಬಳಿಕ ಬೀರಪ್ಪ ಸಹ ಬೆಂಕಿ ಹಚ್ಚಿಕೊಂಡಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಮೂವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು.