ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಧಾರವಾಡ:ವ್ಯಕ್ತಿಯನ್ನು ರಸ್ತೆಯಲ್ಲೇ ಕೊಲೆ ಮಾಡಿರುವ ಘಟನೆ ಇಲ್ಲಿನ ಮರಾಠ ಕಾಲೋನಿಯಲ್ಲಿ ಬಾನುವಾರ ನಡೆದಿದೆ. ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ನಿಂಗಪ್ಪ ಹಡಪದ (60) ಮೃತರು. ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ನಿಂಗಪ್ಪ ಅವರ ಮೇಲೆ ಮೂವರು ಆರೋಪಿಗಳು ಸೇರಿಕೊಂಡು ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಕೊಲೆ ಮಾಡುತ್ತಿರುವ ಲೈವ್ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ.
ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಪ್ರತಿಕ್ರಿಯಿಸಿ, "ಹೆಬ್ಬಳ್ಳಿ ಗ್ರಾಮದ ನಿಂಗಪ್ಪ ಹಡಪದ ಎಂಬವರ ಕೊಲೆಯಾಗಿದೆ. ಆರೋಪಿಗಳ ಬಗ್ಗೆ ಮಾಹಿತಿ ಸಿಕ್ಕಿದೆ. ಮೂವರು ಕೊಲೆ ಮಾಡಿದ್ದಾರೆ. ಸಂಬಂಧಿಗಳೇ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಕುಟುಂಬದ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ಇದೆ. "ಮೂವರನ್ನು ವಶಕ್ಕೆ ಪಡೆದು ವಿಚಾರಿಸುತ್ತೇವೆ. ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ನಿಂಗಪ್ಪ ಧಾರವಾಡದಲ್ಲಿಯೇ ಇದ್ದರು. ಹೆಬ್ಬಳಿ ಅವರ ಗ್ರಾಮ. ಆದರೆ ಧಾರವಾಡದಲ್ಲಿ ರೂಮ್ ಮಾಡಿಕೊಂಡಿದ್ದರು" ಎಂದು ಹೇಳಿದರು.
ಇದನ್ನೂ ಓದಿ:ಶಿವಮೊಗ್ಗ : ಆಸ್ತಿ ವಿಚಾರಕ್ಕೆ ಸೋದರಸಂಬಂಧಿಯನ್ನು ಪೆಟ್ರೋಲ್ ಹಾಕಿ ಸಜೀವ ದಹನ ಮಾಡಿದ ಆರೋಪಿಗಳು
ಈ ಹಿಂದಿನ ಪ್ರಕರಣಗಳು- ಪೆಟ್ರೋಲ್ ಸುರಿದು ವ್ಯಕ್ತಿ ಕೊಲೆ:ಶಿವಮೊಗ್ಗದಲ್ಲಿ ಈ ಘಟನೆ ನಡೆದಿದೆ. ಆಸ್ತಿ ವಿಚಾರಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲಾಗಿತ್ತು. ಆರೋಪಿಗಳು ಮೃತ ವ್ಯಕ್ತಿಯ ಸಂಬಂಧಿಗಳಾಗಿದ್ದಾರೆ. ಕೋರ್ಟ್ನಲ್ಲಿ ಜಮೀನಿಗೆ ಸಂಬಂಧಪಟ್ಟ ವಿಚಾರಣೆ ನಡೆಯುತ್ತಿದ್ದು, ಪ್ರಕರಣದ ತೀರ್ಪು ಮೃತ ವ್ಯಕ್ತಿಯ ಪರವಾಗುತ್ತಿತ್ತು. ಹೀಗಾಗಿ ವ್ಯಕ್ತಿಯನ್ನು ಹಿಂಬಾಲಿಸಿಕೊಂಡು ಬಂದು ಕೃತ್ಯ ಎಸಗಿದ್ದರು.