ಧಾರವಾಡ: ಹೆರಿಗೆಗಾಗಿ ಆಸ್ಪತ್ರೆಗೆ ಹೋಗುತ್ತಿದ್ದ ಗರ್ಭಿಣಿಯೊಬ್ಬರು ಮಾರ್ಗ ಮಧ್ಯದಲ್ಲಿಯೇ ಆ್ಯಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಧಾರವಾಡದ ಹೈಕೋರ್ಟ್ ಬಳಿ ನಡೆದಿದೆ.
ಆ್ಯಂಬುಲೆನ್ಸ್ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ.. 108 ಸಿಬ್ಬಂದಿಯ ಸಮಯೋಚಿತ ಸೇವೆ - undefined
ಇಂದು ಬೆಳಗಿನ ಜಾವ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ಆ್ಯಂಬುಲೆನ್ಸ್‌ನ ರಸ್ತೆ ಪಕ್ಕ ನಿಲ್ಲಿಸಿದ 108 ಸಿಬ್ಬಂದಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.
![ಆ್ಯಂಬುಲೆನ್ಸ್ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ.. 108 ಸಿಬ್ಬಂದಿಯ ಸಮಯೋಚಿತ ಸೇವೆ](https://etvbharatimages.akamaized.net/etvbharat/prod-images/768-512-3950117-thumbnail-3x2-.jpg)
ಅಂಬುಲೆನ್ಸ್ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ
ದುರ್ಗದಕೇರಿ ಗ್ರಾಮದ ಕಾವೇರಿ ಮಾಳಗಿ ಎಂಬ ಗರ್ಭಿಣಿಗೆ ತೀವ್ರ ಹೆರಿಗೆ ನೋವು ಕಾಣಿಸಿತ್ತು.ಇಂದು ಬೆಳಗಿನ ಜಾವ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ಆ್ಯಬುಲೆನ್ಸ್‌ನ ರಸ್ತೆ ಪಕ್ಕ ನಿಲ್ಲಿಸಿ 108 ಸಿಬ್ಬಂದಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.
ಆ್ಯಂಬುಲೆನ್ಸ್ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಕಾವೇರಿ. ಹೆರಿಗೆಯಾದ ಬಳಿಕ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಈಗ ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಜುನಾಥ ಮುಂದಿನಮನಿ ಮತ್ತು ದೇವೇಂದ್ರ ಎಸ್.ಗಂಗಾಧರ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ 108 ಸಿಬ್ಬಂದಿ.