ಧಾರವಾಡ: ಲಾಕ್‍ಡೌನ್ ಸಂದರ್ಭದಲ್ಲಿ ಕೌಟುಂಬಿಕ ದೌರ್ಜನ್ಯಗಳನ್ನು ತಡೆಯಲು ಉಚಿತ ಸಹಾಯವಾಣಿ ಮತ್ತು ದೂರವಾಣಿ ಮೂಲಕ ಸಂತ್ರಸ್ತರ ನೆರವಿಗೆ ಧಾವಿಸಲು ತೆರೆದಿರುವ ದೂರವಾಣಿ ಆಪ್ತ ಸಲಹಾ ಕೇಂದ್ರಕ್ಕೆ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಚಾಲನೆ ನೀಡಿದರು.
ಕೌಟುಂಬಿಕ ದೌರ್ಜನ್ಯ ತಡೆಯಲು ಹೊಸ ಪ್ರಯತ್ನ: ದೂರವಾಣಿ ಆಪ್ತ ಸಲಹಾ ಕೇಂದ್ರ ಸ್ಥಾಪನೆ - ಕೌಟುಂಬಿಕ ದೌರ್ಜನ್ಯ ತಡೆಯಲು ಹೊಸ ಪ್ರಯತ್ನ
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೌಟುಂಬಿಕ ದೌರ್ಜನ್ಯಗಳನ್ನು ತಡೆಯಲು ಉಚಿತ ಸಹಾಯವಾಣಿ ಮತ್ತು ದೂರವಾಣಿ ಮೂಲಕ ಸಂತ್ರಸ್ತರ ನೆರವಿಗೆ ಧಾವಿಸಲು ದೂರವಾಣಿ ಆಪ್ತ ಸಲಹಾ ಕೇಂದ್ರವನ್ನು ಜಿಲ್ಲಾಧಿಕಾರಿ ಕಚೇರಿ ಪ್ರಾಂಗಣದಲ್ಲಿ ತೆರೆಯಲಾಗಿದೆ.
ಈ ರೀತಿಯ ಸಹಾಯವಾಣಿ ರಾಜ್ಯದಲ್ಲಿ ಇದೇ ಮೊದಲು ಎನ್ನಲಾಗಿದ್ದು, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೌಟುಂಬಿಕ ದೌರ್ಜನ್ಯ ತಡೆಗೆ ಪ್ರಾರಂಭಿಸಿರುವ ಸಾಂತ್ವನ ಸಹಾಯವಾಣಿಯ ಭಿತ್ತಿ ಪತ್ರಗಳನ್ನು ಸಚಿವರು ಬಿಡುಗಡೆ ಮಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಿರ್ವಹಣೆಯಾಗುತ್ತಿರುವ ಮಹಿಳಾ ಸಹಾಯವಾಣಿ ಸಂಖ್ಯೆ 181, ದೂರವಾಣಿ ಸಂಖ್ಯೆ 0836-2445484, 0836-2747353 ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ಹಂಚಿಕೊಂಡು ಪರಿಹಾರ ಕಂಡುಕೊಳ್ಳಬಹುದಾಗಿದೆ.
ಮಹಿಳೆಯರಿಗೆ ಆಗುತ್ತಿರುವ ಕೌಟುಂಬಿಕ ದೌರ್ಜನ್ಯದಂತಹ ಪ್ರಕರಣಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುವಂತೆ ಸರ್ಕಾರ ಸತತವಾಗಿ ಪ್ರಯತ್ನ ಮುಂದುವರೆಸಿದೆ. ಶಾಸಕರಾದ ಬಸವರಾಜ ಹೊರಟ್ಟಿ, ಅರವಿಂದ ಬೆಲ್ಲದ, ಸಿ.ಎಂ.ನಿಂಬಣ್ಣವರ, ಶಂಕರ ಪಾಟೀಲ ಮುನೇನಕೊಪ್ಪ, ಪ್ರಸಾದ ಅಬ್ಬಯ್ಯ, ಪ್ರದೀಪ್ ಶೆಟ್ಟರ್, ಜಿಲ್ಲಾಧಿಕಾರಿ ದೀಪಾ ಚೋಳನ್ ಸೇರಿದಂತೆ ಇತರರು ಇದ್ದರು.