ಕರ್ನಾಟಕ

karnataka

ETV Bharat / state

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಪೆಟ್ರೋಲ್ ಟ್ಯಾಂಕರ್: ಹಿಟ್ ಅಂಡ್​​ ರನ್​ಗೆ ಬ್ಯಾಂಕ್ ಕ್ಯಾಷಿಯರ್ ದುರ್ಮರಣ - ರಸ್ತೆ ತಡೆ ನಡೆಸಿದ ಗ್ರಾಮಸ್ಥರು

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಪೆಟ್ರೋಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್​ನಲ್ಲಿ ಕೆಲಸ ಮುಗಿಸಿಕೊಂಡು ಹುಬ್ಬಳ್ಳಿಗೆ ಬೈಕ್​ನಲ್ಲಿ ಹೊರಟಿದ್ದ ಕ್ಯಾಷಿಯರ್‌ಗೆ ಕಾರೊಂದು ಡಿಕ್ಕಿ ಹೊಡೆದಿದೆ.

accident
ಕುಸುಗಲ್ ಗ್ರಾಮದಲ್ಲಿ ರಸ್ತೆ ತಡೆ ನಡೆಸಿದ ಗ್ರಾಮಸ್ಥರು

By

Published : Jan 21, 2023, 2:28 PM IST

ಕುಸುಗಲ್ ಗ್ರಾಮದಲ್ಲಿ ರಸ್ತೆ ತಡೆ ನಡೆಸಿದ ಗ್ರಾಮಸ್ಥರು

ಹುಬ್ಬಳ್ಳಿ: ತಾಲೂಕಿನ ಕುಸುಗಲ್ ಗ್ರಾಮದ ಬಳಿಯ ನವಲಗುಂದ ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಪೆಟ್ರೋಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ನೂರಸಾಬ್ ಕಿರೇಸೂರ ಮೃತ ದುರ್ದೈವಿ. ಈತ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ.

ರಸ್ತೆ ತಡೆ ನಡೆಸಿದ ಗ್ರಾಮಸ್ಥರು:ಅಪಘಾತದಲ್ಲಿ ವ್ಯಕ್ತಿ ಸಾವನ್ನಪ್ಪಿದ ಪರಿಣಾಮ ಒಂದು ಗಂಟೆಗಳ ಕಾಲ ರಸ್ತೆ ತಡೆ ನಡೆಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸ್ಥಳಕ್ಕೆ ತಹಶೀಲ್ದಾರ್​ ಭೇಟಿ ನೀಡಿ, ಪರಿಸ್ಥಿತಿ ತಿಳಿಗೊಳಿಸಿದರು‌. ನಂತರ ಮುಖ್ಯ ರಸ್ತೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಹಿಟ್ ಅಂಡ್​ ರನ್​ಗೆ ಬ್ಯಾಂಕ್ ಕ್ಯಾಷಿಯರ್ ದುರ್ಮರಣ: ಬ್ಯಾಂಕಿನಲ್ಲಿ ಕೆಲಸ ಮುಗಿಸಿಕೊಂಡು ಹುಬ್ಬಳ್ಳಿಗೆ ಬೈಕ್​ನಲ್ಲಿ ಹೊರಟಿದ್ದ ಕ್ಯಾಷಿಯರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಳ್ಳಿ ಗ್ರಾಮದ ಬಳಿಯಲ್ಲಿ ಸಂಭವಿಸಿದೆ. ಮೊರಬದ ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗಿಯಾಗಿದ್ದ ಬಸವರಾಜ ಹೂಲಿ ಸ್ಥಳದಲ್ಲೇ ಸಾವನ್ನಪ್ಪಿದವರು. ಇವರು ಮೂಲತಃ ಮೊರಬದವರಾಗಿದ್ದು, ಹುಬ್ಬಳ್ಳಿಯಲ್ಲಿ ವಾಸವಾಗಿದ್ದರು. ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಕಾರಿನ ನಂಬರ್​ ಪತ್ತೆ ಹಚ್ಚಿದ್ದು, ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:ಕಾರು - ಲಾರಿ ಮುಖಾಮುಖಿ ಡಿಕ್ಕಿ: ವಿವಾಹದ ಫೋಟೋ ಶೂಟ್​ಗೆ ತೆರಳುತ್ತಿದ್ದ ನಾಲ್ವರ ಸಾವು, ಓರ್ವನಿಗೆ ಗಾಯ

ತೆಲಂಗಾಣದಲ್ಲಿ ಕಾರು ಮತ್ತು ಲಾರಿ ಮಧ್ಯೆ ಭೀಕರ ರಸ್ತೆ ಅಪಘಾತ: ಭದ್ರಾದ್ರಿ ಕೊತ್ತಗುಡೆಂ ಜಿಲ್ಲೆಯ ಇಲ್ಲೇಂದು ತಾಲೂಕಿನ ಕೋಟಿಲಿಂಗ ಬಳಿಯ ತಿರುವಿನಲ್ಲಿ ಶುಕ್ರವಾರ ರಾತ್ರಿ 10:30ಕ್ಕೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡದ್ದಾರೆ. ಐವರು ಭದ್ರಾದ್ರಿ ಜಿಲ್ಲೆಯ ಬರ್ಗಂಪಾಡು ತಾಲೂಕಿನ ಮೋತೆ ಗ್ರಾಮಕ್ಕೆ ವೆಡ್ಡಿಂಗ್​ ಶೂಟ್​ಗಾಗಿ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಕೋಟಿಲಿಂಗ ಗ್ರಾಮದ ತಿರುವಿನಲ್ಲಿ ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಇದನ್ನೂ ಓದಿ:ಕಮರಿಗೆ ಉರುಳಿದ ಮಿನಿ ಬಸ್​; ಐವರ ದುರ್ಮರಣ, 15 ಮಂದಿಗೆ ಗಾಯ

ಮಿನಿ ಬಸ್​ ದುರಂತ : ಜಮ್ಮು ಮತ್ತು ಕಾಶ್ಮೀರದ ಬಿಲ್ಲವರ್‌ನ ಧನು ಪರೋಲ್ ಗ್ರಾಮದಲ್ಲಿ ಮಿನಿ ಬಸ್​ವೊಂದು ಕಮರಿಗೆ ಉರುಳಿದ ಪರಿಣಾಮ ದುರ್ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ 15 ಜನರನ್ನು ಬಿಲ್ಲವರ್‌ನಲ್ಲಿರುವ ಉಪ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:ಜೋಯಿಡಾದಲ್ಲಿ ಪ್ರವಾಸಿಗರ ಕಾರು ಡಿಕ್ಕಿಯಾಗಿ ಮೂವರು ಮಹಿಳೆಯರ ದುರ್ಮರಣ

ABOUT THE AUTHOR

...view details