ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ರಸ್ತೆ ಮೇಲಿಂದ ಬಿದ್ದ ಬಸ್​.. ನಾಲ್ವರು ಪ್ರಯಾಣಿಕರ ಸ್ಥಿತಿ ಗಂಭೀರ - ದಕ್ಷಿಣ ಸಂಚಾರಿ ಪೊಲೀಸ್ ಠಾಣೆ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್​ವೊಂದು ಸೇತುವೆ ಮೇಲಿಂದ ಪಲ್ಟಿಯಾಗಿ ಕೆಳಗೆ ಬಿದ್ದ ಪರಿಣಾಮ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

private bus overturned from the bridge  bus overturned from the bridge in Hubli  bus accident in Hubli  ಸೇತುವೆ ಮೇಲಿಂದ ಕೆಳಗೆ ಬಿದ್ದ ಬಸ್  ಪ್ರಯಾಣಿಕರಿಗೆ ಗಂಭೀರ ಗಾಯ  ಬಸ್​ವೊಂದು ಸೇತುವೆ ಮೇಲಿಂದ ಪಲ್ಟಿ  ನಾಲ್ವರು ಪ್ರಯಾಣಿಕರು ಗಂಭೀರ  ನಾಲ್ವರು ಗಂಭೀರವಾಗಿ ಗಾಯ  ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ  ದಕ್ಷಿಣ ಸಂಚಾರಿ ಪೊಲೀಸ್ ಠಾಣೆ
ಹುಬ್ಬಳ್ಳಿಯಲ್ಲಿ ರಸ್ತೆ ಮೇಲಿಂದ ಬಿದ್ದ ಬಸ್

By

Published : Dec 1, 2022, 11:55 AM IST

Updated : Dec 1, 2022, 12:11 PM IST

ಹುಬ್ಬಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ರಸ್ತೆ ಮೇಲಿಂದ ಪಲ್ಟಿಯಾಗಿ ಪಕ್ಕಕ್ಕೆ ಉರುಳಿಬಿದ್ದಿದೆ. ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ನಗರದ ಹಳೇ ಹುಬ್ಬಳ್ಳಿಯ ನೇಕಾರ ನಗರದ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ.

ಹುಬ್ಬಳ್ಳಿಯಲ್ಲಿ ರಸ್ತೆ ಮೇಲಿಂದ ಬಿದ್ದ ಬಸ್

ಇಂದು ಬೆಳಗ್ಗೆ ಬೆಂಗಳೂರಿನಿಂದ ಗುಜರಾತ್ ಕಡೆಯತ್ತ ಹೋಗುತ್ತಿದ್ದ ಖಾಸಗಿ ಬಸ್ ಇದಾಗಿದ್ದು, 36 ಜನರು ಬಸ್​ನಲ್ಲಿದ್ದರು ಎಂದು ತಿಳಿದುಬಂದಿದೆ. ಬಸ್ ಚಾಲಕ ಸೇರಿ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಬ್ಬಳ್ಳಿಯಲ್ಲಿ ರಸ್ತೆ ಮೇಲಿಂದ ಬಿದ್ದ ಬಸ್
ಹುಬ್ಬಳ್ಳಿಯಲ್ಲಿ ರಸ್ತೆ ಮೇಲಿಂದ ಬಿದ್ದ ಬಸ್

ಈ ಸಂಬಂಧ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ:ಕಾರು ಲಾರಿ ಮಧ್ಯೆ ಭೀಕರ ಅಪಘಾತ.. ಪುರಿಯ ಜಗನ್ನಾಥ ದರ್ಶನಕ್ಕೆ ತೆರಳುತ್ತಿದ್ದ ನಾಲ್ವರು ಸಾವು

Last Updated : Dec 1, 2022, 12:11 PM IST

ABOUT THE AUTHOR

...view details