ಧಾರವಾಡ: ಶಾಲೆ ಬಿಟ್ಟ ನಂತರ ಮನೆ ಕಡೆಗೆ ತೆರಳುತ್ತಿದ್ದ ವೇಳೆ ರೈಲಿಗೆ ಸಿಲುಕಿ ಓರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದು, ಇನ್ನೋರ್ವ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡ ಘಟನೆ ಅಳ್ನಾವರ ಪಟ್ಟಣದ ರೈಲ್ವೆ ನಿಲ್ದಾಣದ ಬಳಿ ಸಂಭವಿಸಿದೆ.
ರೈಲ್ವೆ ಹಳಿ ದಾಟುತಿದ್ದ ವೇಳೆ ಟ್ರೈನ್‌ಗೆ ಸಿಲುಕಿ ಸಾವನ್ನಪ್ಪಿದ ವಿದ್ಯಾರ್ಥಿನಿ, ಇನ್ನೋರ್ವಳಿಗೆ ಗಾಯ - hit by a train while crossing a railway line
ರೈಲಿಗೆ ಸಿಲುಕಿ ಓರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದು, ಇನ್ನೋರ್ವ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ರೈಲ್ವೆ ಹಳಿ ದಾಟುತಿದ್ದ ವೇಳೆ ಟ್ರೈನ್ ಗೆ ಸಿಲುಕಿ ಸಾವನ್ನಪ್ಪಿದ ವಿದ್ಯಾರ್ಥಿನಿ
ಕಲಾವತಿ ಮಂಜುನಾಥ್ ಬೊಬಾಟಿ ಘಟನೆಯಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ನಿಖಿತಾ ಪಾಟೀಲ್ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಇಬ್ಬರು ವಿದ್ಯಾರ್ಥಿನಿಯರು ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನವರು ಎನ್ನಲಾಗುತ್ತಿದೆ.
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ತೆರಗಾಂವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಅಳ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.