ಕರ್ನಾಟಕ

karnataka

ETV Bharat / state

ದೇವರ ಮೂರ್ತಿ ಕದ್ದೊಯ್ಯುತ್ತಿದ್ದವನಿಗೆ ಹಿಗ್ಗಾಮುಗ್ಗಾ ಥಳಿತ: ಆರೋಪಿಯನ್ನು ಪೊಲೀಸರಿಗೊಪ್ಪಿಸಿದ ಜನ - villagers who have caught the accused and handover to police

ಗ್ರಾಮದೇವತೆ ದೇವಸ್ಥಾನದಲ್ಲಿ ದೇವರ ಹಿತ್ತಾಳೆ ಮೂರ್ತಿಯನ್ನು ಕಳ್ಳತನ ಮಾಡುವಾಗ ಖದೀಮನು ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದು, ಆತನಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಬಳಿಕ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

ದೇವರ ಮೂರ್ತಿ ಕಳ್ಳತನ ಮಾಡುತ್ತಿದ್ದ ಕಳ್ಳ
ದೇವರ ಮೂರ್ತಿ ಕಳ್ಳತನ ಮಾಡುತ್ತಿದ್ದ ಕಳ್ಳ

By

Published : Jan 28, 2021, 12:20 PM IST

ಹುಬ್ಬಳ್ಳಿ:ದೇವರ ಮೂರ್ತಿಯನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕಲಘಟಗಿ ತಾಲೂಕಿನ ಅರಳಿಹೊಂಡ ಗ್ರಾಮದಲ್ಲಿ ನಡೆದಿದೆ.

ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

ಗ್ರಾಮದೇವತೆ ದೇವಸ್ಥಾನದಲ್ಲಿ ದೇವರ ಹಿತ್ತಾಳೆ ಮೂರ್ತಿಯನ್ನು ಕದ್ದೊಯ್ಯುತ್ತಿರುವಾಗ ಕಳ್ಳನು ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈತ ಮಹಾರಾಷ್ಟ್ರದಿಂದ ಕಬ್ಬು ಕಡಿಯುವ ತಂಡದೊಂದಿಗೆ ಬಂದಿದ್ದಾನೆ ಎಂದು ಹೇಳಲಾಗ್ತಿದೆ.

ಓದಿ:ಹೊರಟ್ಟಿಗೆ ಮತ್ತೊಮ್ಮೆ ಒಲಿದು ಬಂದ ಸಭಾಪತಿ ಸ್ಥಾನ

ಇವನನ್ನು ಈಗ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕಿ ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details