ಹುಬ್ಬಳ್ಳಿ:ಕೋಕ್ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ನಗರದ ಹೊರವಲಯದ ಕುಸುಗಲ್ ಗ್ರಾಮದ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕೋಕ್ ತುಂಬಿದ ಲಾರಿ - ಕುಸುಗಲ್ ಅಪಘಾತ ಸುದ್ದಿ
ನಿನ್ನೆ ಸುರಿದ ಮಳೆಗೆ ಕೋಕ್ ಲಾರಿಯೊಂದು ಹುಬ್ಬಳ್ಳಿಯ ಕುಸುಗಲ್ ಬಳಿ ಕಂದಕಕ್ಕೆ ಉರುಳಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.
ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕೋಕ್ ತುಂಬಿದ ಲಾರಿ
ಹುಬ್ಬಳ್ಳಿಯಿಂದ ನವಲಗುಂದ ಮಾರ್ಗವಾಗಿ ಹೋಗುತ್ತಿದ್ದ ಲಾರಿ ಇದಾಗಿದ್ದು, ನಿನ್ನೆ ಸುರಿದ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.