ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ - ಹಳೇ ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ

ಹಳೇ ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಯುವಕನೋರ್ವನಿಗೆ ಚಾಕು ಇರಿಯಲಾಗಿದೆ.

a young man was stabbed in hubli
ಯುವಕನಿಗೆ ಚಾಕು ಇರಿತ

By

Published : Nov 21, 2022, 12:15 PM IST

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಜಗಳವಾಗಿ ಓರ್ವನಿಗೆ ಚಾಕು ಇರಿದ ಘಟನೆ ಹಳೇ ಹುಬ್ಬಳ್ಳಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಸಂದೀಪ್ ಹಾಗೂ ಇನ್ನಿಬ್ಬರ ನಡುವೆ ಪ್ರಾರಂಭವಾದ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಈ ವೇಳೆ ಕೋಪಗೊಂಡ ಇಬ್ಬರು ಯುವಕರು, ಸಂದೀಪ್​ ಕೈ ಹಾಗೂ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.

ಇದನ್ನೂ ಓದಿ:ಮಾವನ ಮನೆಗೆ ಬಂದಿದ್ದ ಅಳಿಯನಿಂದ ಮಗಳ ಮೇಲೆ ಹಲ್ಲೆ: ಪತ್ನಿ, ಕಂದಮ್ಮನಿಗೆ ಚಾಕು ಇರಿತ

ಕೂಡಲೇ ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details