ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ಸಿಎಎ ಅಭಿನಂದನಾ ರ‍್ಯಾಲಿ: ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಚಾಲನೆ - MLA Shankara patil munena koppa

ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಹು-ಧಾ ಮಹಾನಗರದ ಪ್ರಗತಿಪರ ದಲಿತ ಒಕ್ಕೂಟಗಳ ಮಹಾಸಭಾದ ವತಿಯಿಂದ ಅಂಬೇಡ್ಕರ್ ವೃತ್ತದಲ್ಲಿಂದು ಅಭಿನಂದನಾ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಚಾಲನೆ ನೀಡಿದರು.

Hubli
ಹುಬ್ಬಳ್ಳಿಯಲ್ಲಿ ಸಿಎಎ ಅಭಿನಂದನಾ ರ್ಯಾಲಿ

By

Published : Feb 13, 2020, 7:18 PM IST

ಹುಬ್ಬಳ್ಳಿ:ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಹು-ಧಾ ಮಹಾನಗರದ ಪ್ರಗತಿಪರ ದಲಿತ ಒಕ್ಕೂಟಗಳ ಮಹಾಸಭಾದ ವತಿಯಿಂದ ಅಂಬೇಡ್ಕರ್ ವೃತ್ತದಲ್ಲಿಂದು ಅಭಿನಂದನಾ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಚಾಲನೆ ನೀಡಿದರು.

ಹುಬ್ಬಳ್ಳಿಯಲ್ಲಿ ಸಿಎಎ ಅಭಿನಂದನಾ ರ್ಯಾಲಿ

ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಪೌರತ್ವ ಕಾಯ್ದೆಯನ್ನು ದಲಿತ ವಿರೋಧಿ ಎಂದು ಸುಳ್ಳು ಆರೋಪ ಮಾಡುವ ಮೂಲಕ ದಲಿತ ಹಾಗೂ ಮುಸ್ಲಿಂ ಸಮುದಾಯವನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ ದಲಿತ ಸಮುದಾಯದ ವಿರೋಧವಲ್ಲ ಎಂದು ದಲಿತ ಸಮುದಾಯಗಳು ಒಪ್ಪಿಕೊಂಡಿದ್ದು, ಪ್ರಗತಿಪರ ದಲಿತ ಒಕ್ಕೂಟಗಳ ಮಹಾಸಭಾದ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಲಾಗುತ್ತಿದೆ‌ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಿಎಎ ಬೆಂಬಲಿಸಿ ಸಂವಿಧಾನ ಉಳಿಸಿ ಎಂದು ಘೋಷಣೆ ಕೂಗುವ ಮೂಲಕ ಕೇಂದ್ರ ಸರ್ಕಾರಕ್ಕೆ ದಲಿತ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ಸಾಮೂಹಿಕ ಬೃಹತ್ ರ‍್ಯಾಲಿ ಮುಖಾಂತರ ಅಭಿನಂದನೆ ಸಲ್ಲಿಸಿದರು.

ABOUT THE AUTHOR

...view details