ಧಾರವಾಡ: ಮೆಡಿಕಲ್ ಸೇರಿ ಇಂಜಿನಿಯರಿಂಗ್ ಸೀಟುಗಳ ಬ್ಲಾಕಿಂಗ್ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿದ ನೂರಾರು ವಿದ್ಯಾರ್ಥಿಗಳು, ಸೀಟ್ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ಧ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಮೆಡಿಕಲ್ ಸೀಟುಗಳ ಬ್ಲಾಕಿಂಗ್ ಖಂಡಿಸಿ ಡಿಸಿ ಕಚೇರಿ ಎದುರು ಎಬಿವಿಪಿ ಪ್ರತಿಭಟನೆ ಈಗಾಗಲೇ ಐಟಿ ಇಲಾಖೆ ಮೆಡಿಕಲ್ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ಮೇಲೆ ದಾಳಿ ನಡೆಸಿ, ದಂಧೆಯ ಕರಾಳ ಮುಖವನ್ನು ಬಯಲಿಗೆ ಎಳೆದಿದೆ. ಹಾಗಾಗಿ ರಾಜ್ಯ ಸರ್ಕಾರ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಸೀಟುಗಳ ದಂಧೆಯಲ್ಲಿ ತೊಡಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದರು.
ಇದನ್ನೂ ಓದಿ:ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅತಿಯಾಗಿದೆ ಶಬ್ಧ ಮಾಲಿನ್ಯ: ಉದ್ಭವಿಸಲಿದೆಯಾ ಭಾರಿ ಸಮಸ್ಯೆ?