ಧಾರವಾಡ: ರಾಜ್ಯದ ಉನ್ನತ ಶಿಕ್ಷಣ ಉಳಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಉನ್ನತ ಶಿಕ್ಷಣ ಉಳಿಸುವಂತೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ - ಎಬಿವಿಪಿ
2017ರ ವಿಶ್ವವಿದ್ಯಾಲಯಗಳ ಕಾಯ್ದೆಯನ್ನು ವಾಪಸ್ಸು ಪಡೆದುಕೊಂಡು ರಾಜ್ಯದ ಉನ್ನತ ಶಿಕ್ಷಣ ಉಳಿಸುವಂತೆ ಆಗ್ರಹಿಸಿ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜುಬಿಲಿ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ತಲುಪಿ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 2017ರ ವಿಶ್ವವಿದ್ಯಾಲಯಗಳ ಕಾಯ್ದೆಯನ್ನು ವಾಪಸ್ಸು ತೆಗೆದುಕೊಳ್ಳಬೇಕು. ರಾಜ್ಯದಲ್ಲಿ ಸಮಗ್ರ ಶಿಕ್ಷಣ ನೀತಿ ಜಾರಿಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡರು.
ಶಿಕ್ಷಣ ಸಚಿವರು ದಿನಕ್ಕೊಂದು ಹೇಳಿಕೆ ನೀಡದೆ ರಾಜ್ಯಕ್ಕೆ ಸಮಗ್ರ ಶಿಕ್ಷಣ ನೀತಿ ಜಾರಿಗೆ ತರುವಲ್ಲಿ ಪ್ರಯತ್ನ ಮಾಡಬೇಕು. ಶಿಕ್ಷಣ, ಉನ್ನತ ಶಿಕ್ಷಣಕ್ಕೋಸ್ಕರ ಸಾಮಾಜಿಕ ಅಭಿಪ್ರಾಯ ರೂಪಿಸಬೇಕು. ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು ಹಾಗೂ ಮಹಾವಿದ್ಯಾಲಯಗಳಲ್ಲಿ ಶೇ. 50ರಷ್ಟು ಖಾಲಿ ಇರುವ ಅಧ್ಯಾಪಕ ಹಾಗೂ ಸಿಬ್ಬಂದಿ ನೇಮಕ ಮಾಡಬೇಕು. ರಾಜ್ಯಪಾಲರು ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆ 2017ನ್ನು ಒಪ್ಪಿಗೆ ನೀಡದೆ ತಿರಸ್ಕಾರ ಮಾಡಬೇಕು ಎಂದು ಆಗ್ರಹಿಸಿದರು.