ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ: ಕೆಐಎಡಿಬಿ ಸಹಾಯಕ ಕಾರ್ಯದರ್ಶಿಗೆ ಬೆಳ್ಳಂಬೆಳಗ್ಗೆ ಎಸಿಬಿ ಶಾಕ್​​​! - ಕೆಐಡಿಬಿ ಸಹಾಯಕ ಕಾರ್ಯದರ್ಶಿ ಹರೀಶ್ ಹಳೇಪೇಟೆ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹುಬ್ಬಳ್ಳಿಯ ಕೆಐಎಡಿಬಿ ಸಹಾಯಕ ಕಾರ್ಯದರ್ಶಿ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದು, ಏಕಕಾಲದಲ್ಲಿ ಹುಬ್ಬಳ್ಳಿ-ಬೆಂಗಳೂರು ಎರಡೂ ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

acb riads KIADB assistan secretary house in hubli
ಎಸಿಬಿ ದಾಳಿ

By

Published : Oct 21, 2020, 11:42 AM IST

ಹುಬ್ಬಳ್ಳಿ: ಕೆಐಎಡಿಬಿ ಸಹಾಯಕ ಕಾರ್ಯದರ್ಶಿ ಮನೆ ಮೇಲೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಎಸಿಬಿ ದಾಳಿ
ಕೆಐಡಿಬಿ ಸಹಾಯಕ ಕಾರ್ಯದರ್ಶಿ ಹರೀಶ್ ಹಳೇಪೇಟೆ ಎಂಬುವರ ಮನೆ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಏಕಕಾಲಕ್ಕೆ ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೆಐಡಿಬಿ ಸಹಾಯಕ ಕಾರ್ಯದರ್ಶಿ ಹರೀಶ್ ಹಳೇಪೇಟೆ
ಧಾರವಾಡ‌ ಎಸಿಬಿ ಅಧಿಕಾರಿಗಳು ಹುಬ್ಬಳ್ಳಿಯ ಹೆಗ್ಗೇರಿಯ ಕೋಟಿಲಿಂಗ ನಗರದಲ್ಲಿರುವ ಮನೆ ಹಾಗೂ ಇನ್ನಿತರ ಕಡೆ ದಾಳಿ ನಡೆಸಿದ್ದಾರೆ. ಬೆಂಗಳೂರು ಕೆಐಎಡಿಬಿಯಲ್ಲಿ ಕೆಲಸ ಮಾಡುತ್ತಿದ್ದ ಹರೀಶ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಎಸಿಬಿ ದಾಳಿ ನಡೆದಿದೆ ಎನ್ನಲಾಗಿದೆ.

ABOUT THE AUTHOR

...view details