ಲಾರಿ ಮತ್ತು ಕಾರ್ ಮಧ್ಯೆ ಮುಖಾಮುಖಿ ಡಿಕ್ಕಿ: ಸ್ಥಳದಲ್ಲಿಯೇ ಮೂವರು ಸಾವು - dharwad accident news
14:13 December 30
ಲಾರಿ ಮತ್ತು ಕಾರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಕಾರ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಧಾರವಾಡ ಹೊರವಲಯದ ಸವದತ್ತಿ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಧಾರವಾಡ: ಲಾರಿ ಮತ್ತು ಕಾರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದಾರೆ. ಧಾರವಾಡ ಹೊರವಲಯದ ಸವದತ್ತಿ ರಸ್ತೆಯ ಕೆಇಬಿ ಗ್ರೀಡ್ ಬಳಿ ಈ ದುರ್ಘಟನೆ ಸಂಭವಿಸಿದೆ.
ರೇವಣಸಿದ್ದಯ್ಯ ಇಚ್ಚಂಗಿ (46) ವಿಜಯಾ ಇಚ್ಚಂಗಿ (42) ಮತ್ತು ನಾಗರಾಜ ಇಚ್ಚಂಗಿ (30) ಮೃತರು. ಮೃತ ರೇವಣಸಿದ್ದಯ್ಯ ಮತ್ತು ವಿಜಯಾ ಪತಿ-ಪತ್ನಿ ಎಂದು ಗುರುತಿಸಲಾಗಿದೆ. ಇವರು ಬೆಳಗಾವಿ ಜಿಲ್ಲೆಯ ಸವದತ್ತಿ ಮೂಲದರಾಗಿದ್ದು, ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಹೊರಟಿದ್ದರು ಎನ್ನಲಾಗ್ತಿದೆ.
ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.