ಕಾರವಾರ:ಅಂಕೋಲಾ-ಯಲ್ಲಾಪುರ ಹೆದ್ದಾರಿಯ ಕಂಚಿನ ಬಾಗಿಲು ಬಳಿ ಬೈಕ್-ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ತೀವ್ರವಾಗಿ ಗಾಯಗೊಂಡಿದ್ದಾನೆ.
ಹುಬ್ಬಳ್ಳಿ ಮೂಲದ ಮಧುಸೂದನ್ ಛಬ್ಬಿ (21) ಅಪಘಾತದಲ್ಲಿ ಮೃತಪಟ್ಟ ಯುವಕ.

ಘಟನೆಯಲ್ಲಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಅಂಕೋಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಇಬ್ಬರು ಹುಬ್ಬಳ್ಳಿಯ ಎನ್.ಟಿ.ಟಿ.ಎಫ್ ವಿದ್ಯಾರ್ಥಿಗಳಾಗಿದ್ದು, ಅಂಕೋಲಾದಿಂದ ಹುಬ್ಬಳ್ಳಿ ಕಡೆಗೆ ತೆರಳುವಾಗ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಮಧುಸೂದನ್ ತಲೆ ಒಡೆದಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:
karwar accident news