ಧಾರವಾಡ: ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ನಗರದ ಬೈಪಾಸ್ನಲ್ಲಿ ನಡೆದಿದೆ.
ಕಾರು ಲಾರಿ ನಡುವೆ ಅಪಘಾತ: ನುಜ್ಜು ಗುಜ್ಜಾದ ಕಾರು - dharwad crime news
ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಧಾರವಾಡ ಬೈಪಾಸ್ನಲ್ಲಿ ನಡೆದಿದೆ.

ನುಜ್ಜು ಗುಜ್ಜಾದ ಕಾರು
ಕಾರು ಬೇಲೂರು ಕೈಗಾರಿಕಾ ಪ್ರದೇಶದಿಂದ ಹುಬ್ಬಳ್ಳಿ ಕಡೆ ಹೊರಟಿತ್ತು. ಈ ವೇಳೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ. ಕಾರಿನಲ್ಲಿದ್ದ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದ್ದು, ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.