ಹುಬ್ಬಳ್ಳಿ :ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ, ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ಸಾಗಿಸಲು ಸಕಾಲಕ್ಕೆ ಆ್ಯಂಬುಲೆನ್ಸ್ ಸೇವೆ ಸಿಗದೇ ಅಸುನೀಗಿದ ಘಟನೆ ಹುಬ್ಬಳ್ಳಿ - ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಲಕ್ಷ್ಮೇಶ್ವರದಿಂದ ಉಸುಕು ತುಂಬಿಕೊಂಡು ವೇಗವಾಗಿ ಬರುತ್ತಿದ್ದ ಟಿಪ್ಪರ್ ಎದುರಿಗಿದ್ದ ಸಾರಿಗೆ ಬಸ್ ಓವರಟೆಕ್ ಮಾಡುವ ಭರದಲ್ಲಿ ರಸ್ತೆ ಪಕ್ಕ ನಿಂತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ ರಕ್ತದ ಮಡುವಿನಲ್ಲಿದ್ದ. ಈ ವೇಳೆ, ಸಕಾಲಕ್ಕೆ ಆ್ಯಂಬುಲೆನ್ಸ್ ಸೇವೆ ಸಿಗದೆ ಜೀವ ಬಿಟ್ಟರೇ, ತೀವ್ರ ಗಾಯವಾಗಿದ್ದ ಮಗು ಹಾಗೂ ಪತ್ನಿಯನ್ನು ಸ್ಥಳೀಯರೇ ಆ್ಯಂಬುಲೆನ್ಸ್ ಬಾರದ ಕಾರಣ ಒತ್ತಾಯ ಮಾಡಿ ಪೊಲೀಸ್ 112 ವಾಹನದಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಕೊನೆಗೂ ಟಿಪ್ಪರ್ ಲಾರಿ ಕೆಳಗೆ ಸಿಲುಕಿದ ಬೈಕ್ ಸವಾರನನ್ನು ಆಸ್ಪತ್ರೆಗೆ ಸಾಗಿಸಲು ಆ್ಯಂಬುಲೆನ್ಸ್ ಬಾರದೇ ಅಪಘಾತ ಸ್ಥಳದಲ್ಲೇ ಒಂದು ಗಂಟೆಗೂ ಅಧಿಕ ಕಾಲ ನರಳಾಟ ನಡೆಸಿದ್ದಾರೆ. ನಂತರ ಸ್ಥಳೀಯರ ಸಹಾಯದಿಂದ ಗೂಡ್ಸ್ ವಾಹನದ ಮೂಲಕ ಕುಂದಗೋಳ ತಾಲೂಕು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದರು.