ಹುಬ್ಬಳ್ಳಿ: ಎರಡೂ ಕಾರುಗಳ ಮುಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿ-ಗದಗ ರಸ್ತೆಯ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ಬಳಿ ನಡೆದಿದೆ.
ಎರಡು ಕಾರುಗಳ ಮಧ್ಯೆ ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ, ಮೂವರ ಸ್ಥಿತಿ ಗಂಭೀರ - two cars accident
ಇನ್ನೋವಾ ಕಾರು ಹಾಗೂ ಬಲೆನೋ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಬಲೆನೋ ಕಾರು ಜಖಂಗೊಂಡಿದೆ.
ಜಖಂಗೊಂಡ ಕಾರು
ಧಾರವಾಡ ಮೂಲದ ಸ್ಮಿತಾ ಕಟ್ಟಿ ಹಾಗೂ ಇನ್ನೋರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದುರಂತದಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಂಭೀರವಾಗಿ ಗಾಯಗೊಂಡ ಮೂವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಲೆನೋ ಕಾರಿನಲ್ಲಿದ್ದವರೇ ಮೃತರು ಮತ್ತು ಗಾಯಾಳುಗಳಾಗಿದ್ದಾರೆ.
ಈ ಕಾರು ಹುಬ್ಬಳ್ಳಿಯಿಂದ ಬಳ್ಳಾರಿಗೆ ಹೊರಟಿತ್ತು ಎನ್ನಲಾಗಿದೆ. ಇನ್ನೋವಾ ಕಾರು ಗದಗದಿಂದ ಹುಬ್ಬಳ್ಳಿ ಕಡೆ ಬರುತ್ತಿತ್ತು. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಬಲೆನೋ ಕಾರು ಸಂಪೂರ್ಣ ಜಖಂಗೊಂಡಿದೆ.