ಹುಬ್ಬಳ್ಳಿ: ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-4 ಧಾರಾವತಿ ಹನುಮಂತ ದೇವಸ್ಥಾನದ ಬಳಿ ನಡೆದಿದೆ.
ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು - National Highway-4
ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಸವಾರ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು
ಮಂಜುನಾಥ ಫೀರಣ್ಣವರ (41) ಮೃತ ದುರ್ದೈವಿ. ಈತ ಧಾರವಾಡದಿಂದ ನಗರಕ್ಕೆ ಬೈಕ್ನಲ್ಲಿ ಬರುತ್ತಿದ್ದಾಗ ಎದುರುಗಡೆಯಿಂದ ಬಂದ ಲಾರಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.
ಘಟನೆ ಸಂಬಂಧ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರಿಕ್ಷೆಗೆ ಕಳುಹಿಸಲಾಗಿದೆ.