ಕರ್ನಾಟಕ

karnataka

ETV Bharat / state

ಗಬ್ಬೂರ ಬೈಪಾಸ್ ಬಳಿ ಅಪಘಾತ: ಏಳು ಜನರಿಗೆ ಗಂಭೀರ ಗಾಯ - ಹುಬ್ಬಳ್ಳಿ ಸುದ್ದಿ

ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ಲಾರಿ ಹಾಗೂ ಹಾವೇರಿ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಏಳು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ಗಬ್ಬೂರ ಬೈಪಾಸ್ ಬಳಿ ನಡೆದಿದೆ.

gabbur-bypass
ಗಬ್ಬೂರ ಬೈಪಾಸ್ ಬಳಿ ಅಪಘಾತ

By

Published : Jul 7, 2021, 2:43 PM IST

ಹುಬ್ಬಳ್ಳಿ: ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಏಳು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ಗಬ್ಬೂರ ಬೈಪಾಸ್ ಬಳಿ ನಡೆದಿದೆ.

ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ಲಾರಿ ಹಾಗೂ ಹಾವೇರಿ ಕಡೆಗೆ ಹೋಗುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

ವಾಹನದ ಬಗ್ಗೆ ಹಾಗೂ ಗಾಯಗೊಂಡಿರುವವರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಈ ಕುರಿತಂತೆ ಬೆಂಡಿಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ABOUT THE AUTHOR

...view details