ಹುಬ್ಬಳ್ಳಿ:ಚಿಕ್ಕ ಮಕ್ಕಳಿಗೆ ಚಾಕೊಲೇಟ್ ಆಮಿಷ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಹಳೇ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಪ್ರತಿಷ್ಠಿತ ಹೋಟೆಲ್ಯೊಂದರಲ್ಲಿ ಕುಕ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಗರದ ಹೊಸೂರ ಬಳಿ ಇರುವ ಪ್ರತಿಷ್ಠಿತ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಕುಕ್ ಅಪ್ರಾಪ್ತ ಮಕ್ಕಳಿಗೆ ಚಾಕೊಲೇಟ್, ಹಣದಾಸೆ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಷ್ಟೇ ಅಲ್ಲದೇ ಮಕ್ಕಳನ್ನು ಬೆತ್ತಲೆಗೊಳಿಸಿ, ತಾನೇ ವಿಡಿಯೋ ಮಾಡಿ ಹಣಕ್ಕೆ ಮಾರಾಟ ಮಾಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.