ಧಾರವಾಡ:ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ವಶದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆರೋಗ್ಯ ತಪಾಸಣೆಗಾಗಿ ಪೊಲೀಸರು ಬಿಗಿ ಬಂದೋಬಸ್ತ್ ಮೂಲಕ ಧಾರವಾಡ ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾರೆ. ಈ ವೇಳೆ, ಮಾತನಾಡಿದ ಅವರು, ಇದೊಂದು ರಾಜಕೀಯ ಷಡ್ಯಂತ್ರ ಎಂದು ಆರೋಪಿಸಿದ್ದಾರೆ.
ಇದು ನೂರಕ್ಕೆ ನೂರರಷ್ಟು ರಾಜಕೀಯ ಷಡ್ಯಂತ್ರ: ವಿನಯ್ ಕುಲಕರ್ಣಿ ಆರೋಪ - ಸಿಬಿಐ
ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಆರೋಗ್ಯ ತಪಾಸಣೆಗಾಗಿ ಉಪನಗರ ಪೊಲೀಸ್ ಠಾಣೆಯಿಂದ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ. ಈ ವೇಳೆ ಮಾತನಾಡಿದ ಅವರು, ಇದು ನೂರಕ್ಕೆ ನೂರರಷ್ಟು ರಾಜಕೀಯ ಕುತಂತ್ರ ಎಂದು ಆರೋಪಿಸಿದ್ದಾರೆ.
ಧಾರವಾಡ ಜಿಲ್ಲಾಸ್ಪತ್ರೆ
ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಆರೋಗ್ಯ ತಪಾಸಣೆಗಾಗಿ ಉಪನಗರ ಪೊಲೀಸ್ ಠಾಣೆಯಿಂದ ಜಿಲ್ಲಾಸ್ಪತ್ರೆಗೆ ಕರೆತಂದಿದ್ದು, ಆರೋಗ್ಯ ತಪಾಸಣೆ ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸುವ ಸಾಧ್ಯತೆ ಇದೆ.
ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಕೊರೊನಾ ಪರೀಕ್ಷೆ ನಡೆಸಲು ಪಿಪಿಇ ಕಿಟ್ ಧರಿಸಿ ಸಿಬ್ಬಂದಿ ಒಳ ಹೋಗಿದ್ದಾರೆ.
Last Updated : Nov 5, 2020, 6:01 PM IST